ADVERTISEMENT

ಮೆಲ್ಲಹಳ್ಳಿ ಕಸ್ತೂರಬಾ ಗಾಂಧಿ ಶಾಲೆಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 8:00 IST
Last Updated 26 ಫೆಬ್ರುವರಿ 2026, 8:00 IST
ಯಳಂದೂರು ತಾಲ್ಲೂಕಿನ ಮೆಳ್ಳಹಳ್ಳಿ ಕಸ್ತೂರ ಭಾ ಗಾಂಧಿ ಬಾಲಕಿಯರ ವಿದ್ಯಾಲಯಕ್ಕೆ ಮಿಷನ್ ಪ್ರಕೃತಿ ಯೋಜನೆಯಡಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ನೀಡಿದರು.
ಯಳಂದೂರು ತಾಲ್ಲೂಕಿನ ಮೆಳ್ಳಹಳ್ಳಿ ಕಸ್ತೂರ ಭಾ ಗಾಂಧಿ ಬಾಲಕಿಯರ ವಿದ್ಯಾಲಯಕ್ಕೆ ಮಿಷನ್ ಪ್ರಕೃತಿ ಯೋಜನೆಯಡಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ನೀಡಿದರು.   

ಯಳಂದೂರು: ತಾಲ್ಲೂಕಿನ ಮೆಲ್ಲಹಳ್ಳಿ ಕಸ್ತೂರಬಾ ಗಾಂಧಿ ವಸತಿ ಶಾಲೆ ಮಿಷನ್ ಪ್ರಕೃತಿ ಯೋಜನೆಯಡಿ  ಅತ್ಯುತ್ತಮ ಶಾಲೆ ಪ್ರಶಸ್ತಿ ಪಡೆದುಕೊಂಡಿದೆ.

ಪರಿಸರ ಜಾಗೃತಿ, ಹಸಿರು ಚಟುವಟಿಕೆ, ತ್ಯಾಜ್ಯ ವಿಲೇವಾರಿ ಮತ್ತಿತರ ಪರಿಸರಸ್ನೇಹಿ ಕೆಲಸಗಳಲ್ಲಿ ಸಕ್ರಿಯ ಮಕ್ಕಳ ಭಾಗವಹಿಸುವಿಕೆ ಹಾಗೂ ಪ್ರಾಯೋಗಿಕ ಚಟುವಟಿಕೆಯಲ್ಲಿ ತೊಡಗುವ ಶಾಲೆಗಳಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.

ಸೋಮವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಏರ್ಪಡಿಸಿದ್ದ ಮಿಷನ್ ಪ್ರಕೃತಿ ಸಮಾರಂಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಾಲೆಗೆ ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯ ಶಿಕ್ಷಕಿ ಉಮ್ಮೆಸಲ್ಮಾ ಹಾಗೂ ಮಕ್ಕಳು ಇದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.