ADVERTISEMENT

ಮತದಾನದ ಹಕ್ಕು ಚಲಾಯಿಸಿ: ಮುಖ್ಯಾಧಿಕಾರಿ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2024, 5:22 IST
Last Updated 22 ಮಾರ್ಚ್ 2024, 5:22 IST
ಯಳಂದೂರು ಪಟ್ಟಣದಲ್ಲಿ ಗುರುವಾರ ಮತದಾನ ಜಾಗೃತಿಗಾಗಿ ಪ.ಪಂ.ಸದಸ್ಯರು ಬೈಕ್ ಮೂಲಕ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಯಳಂದೂರು ಪಟ್ಟಣದಲ್ಲಿ ಗುರುವಾರ ಮತದಾನ ಜಾಗೃತಿಗಾಗಿ ಪ.ಪಂ.ಸದಸ್ಯರು ಬೈಕ್ ಮೂಲಕ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.   

ಯಳಂದೂರು: ಲೋಕಸಭಾ ಚುನಾವಣೆ ಸಮಯದಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತಗಟ್ಟೆಗೆ ತೆರಳಿ ಮತ ಚಲಾಯಿಸಬೇಕು ಎಂದು ಮುಖ್ಯಾಧಿಕಾರಿ ಮಹೇಶ್ ಕುಮಾರ್ ಹೇಳಿದರು.

ಪಟ್ಟಣದಲ್ಲಿ ಕಚೇರಿ ನೌಕರರು ಮತ್ತು ಸದಸ್ಯರು ಮತದಾನ ಜಾಗೃತಿಗಾಗಿ ಗುರುವಾರ ಆಯೋಜಿಸಿದ್ದ ಬೈಕ್ ಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತದಲ್ಲಿ ಐದು ವರ್ಷಕ್ಕೆ ಒಮ್ಮೆ ಚುನಾವಣೆ ನಡೆಯುತ್ತದೆ. ಪ್ರತಿ ಮತಗಟ್ಟೆಯಲ್ಲೂ ಶೇಕಡವಾರು ಪ್ರಮಾಣ ಹೆಚ್ಚಾಗುತ್ತಲೇ ಇದೆ. ಮತದಾರರು ಮತ ಹಾಕುವ ಮೂಲಕ ಪ್ರಜಾ ಪ್ರಭುತ್ವದ ಯಶಸ್ಸಿಗೆ ಶ್ರಮಿಸಬೇಕು ಎಂದರು.

ADVERTISEMENT

ಪ.ಪಂ, ಕಚೇರಿಯಿಂದ ಹೊರಟ ಸವಾರರು ಕೆಕೆ ರಸ್ತೆ, ಹಳೇ ಅಂಚೆ ಕಚೇರಿ, ಬಳೆಪೇಟೆ, ದೊಡ್ಡಂಗಡಿ ಬೀದಿ, ಬಸ್ ನಿಲ್ದಾಣ ಹಾಗೂ ಸಂತೆಮರಹಳ್ಳಿ ರಸ್ತೆಗಳಲ್ಲಿ ತೆರಳಿ ಮತದಾನ ಜಾಗೃತಿ ಮೂಡಿಸಿದರು.

ಎಂಜಿನಿಯರ್ ನಾಗೇಂದ್ರ, ಮಲ್ಲಿಕಾರ್ಜುನಸ್ವಾಮಿ, ರಘು ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.