
ಪ್ರಜಾವಾಣಿ ವಾರ್ತೆ
ಬಂಧನ (ಸಾಂದರ್ಭಿಕ ಚಿತ್ರ)
ಗುಂಡ್ಲುಪೇಟೆ: ಪಟ್ಟಣದ ಟೀ ಅಂಗಡಿಯೊಂದರ ಮುಂದೆ ಮಂಗಳವಾರ ರಾತ್ರಿ ಗುಂಪೊಂದು ಪಟ್ಟಣದ ಮಹದೇವಪ್ರಸಾದ್ ನಗರದ ನಿವಾಸಿ ಸಾಬಿರ್ ಪಾಷ(22) ಎಂಬವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಧನು ಮತ್ತು ಈಶ್ವರ್ ಎಂಬ ಇಬ್ಬರನ್ನು ಬಂಧಿಸಲಾಗಿದ್ದು, ಉಳಿದವರು ಪರಾರಿಯಾಗಿದ್ದಾರೆ.
ಘಟನೆ ವಿವರ: ಟೀ ಕುಡಿಯುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಆರು ಜನರ ಗುಂಪು ಸಾಬಿರ್ ಪಾಷ ಮುಖ ಹಾಗೂ ಬೆನ್ನಿಗೆ ಇರಿದು ಪರಾರಿಯಾಗಿತ್ತು. ಗಾಯಾಳು ಸಾಬಿರ್ ಪಾಷನನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್, ಡಿವೈಎಸ್ಪಿ ಸ್ನೇಹರಾಜ್, ಇನ್‌ಸ್ಪೆಕ್ಟರ್ ಜಯಕುಮಾರ್ ಭೇಟಿ ನೀಡಿ, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿ, ಮಾಹಿತಿ ಕಲೆ ಹಾಕಿದ್ದಾರೆ. ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.