ADVERTISEMENT

ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ದೇವಾಲಯದ ಅರ್ಚಕ ಬಂಧನ

​ಪ್ರಜಾವಾಣಿ ವಾರ್ತೆ
Published 25 ಜನವರಿ 2022, 12:50 IST
Last Updated 25 ಜನವರಿ 2022, 12:50 IST
   

ಚಾಮರಾಜನಗರ: ಬಾಲಕಿಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪದಲ್ಲಿ ದೇವಾಲಯದ ಅರ್ಚಕರೊಬ್ಬರನ್ನು ಪೊಲೀಸರು ತಾಲ್ಲೂಕಿನ ಬೇಡಗುಳಿಯಲ್ಲಿ ಬಂಧಿಸಿದ್ದಾರೆ.

17 ವರ್ಷ ವಯಸ್ಸಿನ ಬಾಲಕಿಯು ಈಗ ಏಳು ತಿಂಗಳ ಗರ್ಭಿಣಿಯಾಗಿದ್ದು, ಆಕೆಯನ್ನು ಸದ್ಯ ಬಾಲಮಂದಿರದಲ್ಲಿ ಇರಿಸಲಾಗಿದೆ.

ದೇವಾಲಯವೊಂದರಲ್ಲಿ ಅರ್ಚಕರಾಗಿದ್ದ ರವಿ (23) ಬಂಧಿತ ಆರೋಪಿ. ಅವರುಮೂರು ವರ್ಷಗಳಿಂದ ಬಾಲಕಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

’ಕೋವಿಡ್ ಸಂಬಂಧ ಗ್ರಾಮದಲ್ಲಿ ಪಂಚಾಯಿತಿ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಜಾಗೃತಿ ಮೂಡಿಸುತ್ತಿದ್ದಾಗ ಬಾಲಕಿಯನ್ನು ಕಂಡು ಅನುಮಾನಗೊಂಡು ವಿಚಾರಿಸಿದಾಗ ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಮತ್ತಷ್ಟು ಪ್ರಶ್ನಿಸಿದಾಗ ನಡೆದಿರುವುದನ್ನು ತಿಳಿಸಿದ್ದಾಳೆ‘ ಎಂದು ಅವರು ಮಾಹಿತಿ ನೀಡಿದ್ದಾರೆ.

’ಬಾಲಕಿಯ ತಾಯಿ ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಆರೋಪಿಯನ್ನು ಪೋಕ್ಸೊ ಕಾಯ್ದೆ ಅಡಿಯಲ್ಲಿ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ‘ ಎಂದು ಚಾಮರಾಜನಗರ ಮಹಿಳಾ ಠಾಣೆ ಇನ್‌ಸ್ಪೆಕ್ಟರ್‌ ಪುಟ್ಟಸ್ವಾಮಿ ಅವರು ’ಪ್ರಜಾವಾಣಿ‘ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.