
ಪ್ರಜಾವಾಣಿ ವಾರ್ತೆ
ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಗ್ರಾಮದ ಬಳಿ ಕಲ್ಲುಕಟ್ಟೆ ಜಲಾಶಯಕ್ಕೆ ಹಾರಿ ಯುವಕ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.
ಬಸವಾಪುರ ಗ್ರಾಮದ ಮಹೇಶ್(20) ಮೃತ ಯುವಕ. ಈತನ ಶವ ಶಿವಪುರ ಗ್ರಾಮದ ಬಳಿಯ ಕಲ್ಲುಕಟ್ಟೆ ಜಲಾಶಯದಲ್ಲಿ ತೇಲುತ್ತಿದ್ದ ವೇಳೆ ಸ್ಥಳೀಯರು ಗಮನಿಸಿ, ನಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಅಗ್ನಿಶಾಮಕ ದಳದವರನ್ನು ಸ್ಥಳಕ್ಕೆ ಬರಮಾಡಿಕೊಂಡು ಶವವನ್ನು ಜಲಾಶಯದಿಂದ ಮೇಲೆತ್ತಿದ್ದಾರೆ. ಈತ ಮಾನಸಿಕ ಅಶ್ವಸ್ಥನಾಗಿದ್ದ ಎನ್ನಲಾಗುತ್ತಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ನಂತರ ವಾರಸುದಾರರಿಗೆ ಹಸ್ತಾಂತರ ಮಾಡಲಾಯಿತು. ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.