ADVERTISEMENT

ಚಾಮರಾಜನಗರ| ಬಾಲಕಿಗೆ ಲೈಂಗಿಕ ದೌರ್ಜನ್ಯ: ಯುವಕನಿಗೆ 2 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 19 ಜನವರಿ 2023, 16:16 IST
Last Updated 19 ಜನವರಿ 2023, 16:16 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಚಾಮರಾಜನಗರ: ಬಾಲಕಿಯನ್ನು ಅಪಹರಿಸಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಯುವಕನಿಗೆ ನಗರದ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಜಿಲ್ಲೆಯ ಹನೂರು ತಾಲ್ಲೂಕಿನ ಮಂಗಲ ಗ್ರಾಮದ ರಮೇಶ (23) ಶಿಕ್ಷೆಗೊಳಗಾದ ಯುವಕ.

ತನ್ನ ಪ್ರೀತಿಸುವಂತೆ ಬಾಲಕಿಯನ್ನು ಪೀಡಿಸುತ್ತಿದ್ದ ರಮೇಶ, ಆಕೆಗೆ ಇಲ್ಲಸಲ್ಲದ ಆಸೆ ತೋರಿಸಿ 2020ರ ಸೆ.29ರಂದು ಆಕೆಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ್ದ.

ADVERTISEMENT

ಈ ಸಂಬಂಧ ಹನೂರು ಠಾಣೆಯಲ್ಲಿ ಪೋಕ್ಸೊ ಅಡಿ ಪ್ರಕರಣ ದಾಖಲಾಗಿತ್ತು. ಅಂದಿನ ಸಬ್‌ ಇನ್‌ಸ್ಪೆಕ್ಟರ್‌ ನಾಗೇಶ್ ಅವರು ಆರೋಪಿ ರಮೇಶನ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು.

ಆರೋಪಗಳು ಸಾಬೀತಾಗಿರುವುದರಿಂದ ನ್ಯಾಯಾಧೀಶರಾದ ಎ.ಸಿ. ನಿಶಾರಾಣಿಯವರು ರಮೇಶನಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದ್ದಾರೆ. 30 ದಿನಗಳ ಒಳಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಬಾಲಕಿಗೆ ₹20 ಸಾವಿರ ನೀಡಬೇಕು ಎಂದೂ ಅವರು ಆದೇಶದಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.