ADVERTISEMENT

ಚಾಮರಾಜನಗರ: ಏಳು ತಿಂಗಳ ಬಳಿಕ ಶೂನ್ಯ ಕೋವಿಡ್‌ ಪ್ರಕರಣ

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 16:37 IST
Last Updated 11 ಜನವರಿ 2021, 16:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಸೋಮವಾರ ಕೋವಿಡ್‌ ಪ್ರಕರಣ ವರದಿಯಾಗಿಲ್ಲ. ಸೋಮವಾರ 393 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಎಲ್ಲವೂ ನೆಗೆಟಿವ್‌ ಬಂದಿದೆ. ಒಂಬತ್ತು ಮಂದಿ ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 37ಕ್ಕೆ ಇಳಿದಿದೆ. ಈ ಪೈಕಿ 29 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ ಯಾರೂ ಇಲ್ಲ.

ಜಿಲ್ಲೆಯಲ್ಲಿ ಜೂನ್‌ 7ರಂದು ಮೊದಲ ಪ‍್ರಕರಣ ದೃಢಪಟ್ಟಿತ್ತು. ನಂತರ ಎರಡು ವಾರದ ಸೋಂಕಿನ ಪ್ರಕರಣ ವರದಿಯಾಗಿರಲಿಲ್ಲ.ಮೂರನೇ ವಾರದಲ್ಲಿ ಕೋವಿಡ್‌ ಪ್ರಕರಣಗಳು ಪತ್ತೆಯಾಗಲು ರಂಭವಾದ ನಂತರ ಪ್ರತಿ ದಿನವೂ ಪ್ರಕರಣ ದಾಖಲಾಗುತ್ತಲೇ ಇತ್ತು.

ADVERTISEMENT

ಜಿಲ್ಲೆಯಲ್ಲಿ ಈವರೆಗೆ 6,828 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 6,658 ಮಂದಿ ಗುಣಮುಖರಾಗಿದ್ದಾರೆ. 111 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಕೋವಿಡ್‌ಯೇತರ ಕಾರಣಗಳಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.