ADVERTISEMENT

ಜಿ.ಪಂ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ಚುನಾವಣೆ

​ಪ್ರಜಾವಾಣಿ ವಾರ್ತೆ
Published 29 ಮೇ 2020, 16:59 IST
Last Updated 29 ಮೇ 2020, 16:59 IST
ಎಂ.ಅಶ್ವಿನಿ
ಎಂ.ಅಶ್ವಿನಿ   

ಚಾಮರಾಜನಗರ: ಜಿಲ್ಲಾ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆಯಲಿದೆ.

ತೆರಕಣಾಂಬಿ ಕ್ಷೇತ್ರದ ಕಾಂಗ್ರೆಸ್ ಸದಸ್ಯೆ ಎಂ.ಅಶ್ವಿನಿ ಅವರು ಅಧ್ಯಕ್ಷೆಯಾಗಿ ಆಯ್ಕೆಯಾಗುವುದು ಖಚಿತವಾಗಿದೆ.

ಚುನಾವಣೆ ಸಂಬಂಧ ಬೆಳಿಗ್ಗೆ 11.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮೈಸೂರು ವಿಭಾಗೀಯ ಪ್ರಾದೇಶಿಕ ಆಯುಕ್ತರು ಸಭೆ ಕರೆದಿದ್ದಾರೆ.

ADVERTISEMENT

ಮುಂಜಾಗ್ರತಾ ಕ್ರಮಗಳ ಪಾಲನೆಗೆ ಸೂಚನೆ: ಈ ಮಧ್ಯೆ, ಚುನಾವಣೆ ನಡೆಯುವ ಸಂದರ್ಭದಲ್ಲಿ‌ ಕೋವಿಡ್-19 ತಡೆಗಾಗಿ ಎಲ್ಲ‌ ಮುಂಜಾಗ್ರತಾ ಕ್ರಮಗಳನ್ನು‌ ಪಾಲಿಸಬೇಕು ಎಂದು‌ ಜಿಲ್ಲಾ ಪಂಚಾಯಿತಿ‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ನಾರಾಯಣರಾವ್ ಸೂಚಿಸಿದ್ದಾರೆ.

ಸ್ಯಾನಿಟೈಸರ್, ಮಾಸ್ಕ್ ಬಳಸಬೇಕು ಹಾಗೂ ಅಂತರವನ್ನು ಕಾಯ್ದುಕೊಳ್ಳಬೇಕು. ರಾಜಕೀಯ ಪಕ್ಷಗಳ ಕಾರ್ಯಕರ್ತರು, ಸಾರ್ವಜನಿಕರು ಜಿಲ್ಲಾಡಳಿತ ಭವನದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಗುಂಪು ಸೇರುವುದು, ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.