ADVERTISEMENT

ಅಂಚೆ ಮೂಲಕ ಕನ್ನಡ ಶಿಕ್ಷಣ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2011, 11:10 IST
Last Updated 4 ಅಕ್ಟೋಬರ್ 2011, 11:10 IST

ಚಿಕ್ಕಬಳ್ಳಾಪುರ: ಕನ್ನಡ ಬಾರದ ಸರ್ಕಾರಿ ನೌಕರರಿಗೆ ಅಂಚೆ ಮೂಲಕ ಕನ್ನಡ ಕಲಿಸುವ ನೂತನ ಯೋಜನೆಯನ್ನು ಮೈಸೂರು ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆರಂಭಿಸಿದ್ದು, ಅಸಕ್ತರು ಯೋಜನೆಯಡಿ ಅರ್ಜಿ ಸಲ್ಲಿಸಬಹುದು.

ಹನ್ನೆರಡು ತಿಂಗಳ ಕಾಲ ಅಂಚೆ ಮೂಲಕ ಕನ್ನಡ ಶಿಕ್ಷಣ ನೀಡುವ ಯೋಜನೆ ರೂಪಿಸಲಾಗಿದ್ದು, ರಾಜ್ಯದ ಎಲ್ಲ ನಗರಸಭೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯ ಮಿತ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ವಿಶ್ವವಿದ್ಯಾನಿಲಯ ಗಳು, ಶಾಲಾ-ಕಾಲೇಜು ಸಿಬ್ಬಂದಿ ಮತ್ತು ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಅರ್ಜಿ ಸಲ್ಲಿಸ ಬಹುದು. ಅರ್ಜಿ ಸಲ್ಲಿಸಲು ಎಸ್ಸೆಸ್ಸೆಲ್ಸಿ ಉತ್ತೀರ್ಣ ರಾಗಿರಬೇಕು. ವಯೋಮಿತಿ 18 ರಿಂದ 50ರೊಳಗೆ ಇರಬೇಕು. ರೂ.250 ಡಿಡಿ ಪಾವತಿಸಿದ್ದಲ್ಲಿ, ಪಾಠವಳಿಗಳನ್ನು ಕಳುಹಿಸಲಾ ಗುವುದು. ಅರ್ಜಿ ಹಾಕಲು ಅ.31 ಕೊನೆ ದಿನ. ಹೆಚ್ಚಿನ ವಿವರಗಳಿಗೆ ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು. ಇಲ್ಲಿ ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.