ಗೌರಿಬಿದನೂರು: ಪಟ್ಟಣದಲ್ಲಿ ಗುರುವಾರ ನಡೆದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚಿನ್ನಪ್ಪರೆಡ್ಡಿ, ಉಪಾಧ್ಯಕ್ಷರಾಗಿ ಅನಿತಾ ಗಂಗಾಧರಪ್ಪ ಅವಿರೋಧವಾಗಿ ಆಯ್ಕೆಯಾದರು.
ಒಳ ಒಪ್ಪಂದಂತೆ 10 ತಿಂಗಳ ಅಧಿಕಾರವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚುನಾವಣೆ ನಡೆಯಿತು.
ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು. ಚುನಾವಣೆಯ ಅಧಿಕಾರಿಯಾಗಿ ಉಪವಿಭಾಗಾಧಿಕಾರಿ ಸತೀಶ್‌ಕುಮಾರ್ ಕಾರ್ಯನಿರ್ವಹಿಸಿದರು.
ಕಾಂಗ್ರೆಸ್ ಮುಖಂಡ ವೇಣುಗೋಪಾಲರೆಡ್ಡಿ, ಜಿ.ಪಂ.ಸದಸ್ಯ ರಾಘವೇಂದ್ರ ಹನುಮಾನ್, ಕೇಶವರೆಡ್ಡಿ, ತಾ.ಪಂ.ಮಾಜಿ ಅಧ್ಯಕ್ಷ ಶ್ರೀನಿವಾಸಪ್ಪ, ಉಪಾಧ್ಯಕ್ಷೆ ಚೇತನಾ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೆಂಕಟರವಣ, ವಕ್ತಾರ ಕಮಲಾಕರ್, ತಾಲ್ಲೂಕು ಪಂಚಾಯಿತಿ ಸದಸ್ಯ ನಿರಂಜನ್, ಗಂಗಾಧರಪ್ಪ, ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.