ಬಾಗೇಪಲ್ಲಿ: ತಾಲ್ಲೂಕಿನಲ್ಲಿ ಬಹುತೇಕ ಫಲಾನುಭವಿಗಳಿಗೆ ಈಗಾಗಲೇ ಪಡಿತರ ಚೀಟಿಗಳನ್ನು ವಿತರಿಸಲಾಗಿದ್ದು, ಉಳಿದ ಫಲಾನುಭವಿಗಳನ್ನು ಗುರುತಿಸಿ ಪಡಿತರ ಚೀಟಿಗಳನ್ನು ವಿತರಿಸಲಾಗುತ್ತದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.
ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಫಲಾನುಭವಿಗಳಿಗೆ ಪಡಿತರ ಚೀಟಿ ವಿತರಿಸಿ ಮಾತನಾಡಿದರು.
ಪಟ್ಟಣ ಮತ್ತು ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಫಲಾನುಭವಿಗಳಿಗೆ ಪಡಿತರ ಚೀಟಿ ವಿತರಿಸಲು ತಾಲ್ಲೂಕಿನ ಆಹಾರ ಶಾಖೆ ಎಲ್ಲ ಸಿದ್ಧತೆ ನಡೆಸಿದೆ. ಪ್ರಥಮವಾಗಿ ಪಟ್ಟಣದಲ್ಲಿ ಸುಮಾರು 1800 ಪಡಿತರ ಚೀಟಿಗಳನ್ನು ವಿತರಿಸಲಾಗುತ್ತದೆ ಎಂದರು.
ಮುಂದಿನ ದಿನಗಳಲ್ಲಿ ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲೂ ಪಡಿತರ ಚೀಟಿ ವಿತರಿಸಲು ಶೀಘ್ರವಾಗಿ ವ್ಯವಸ್ಥೆ ಮಾಡಲಾಗುವುದೆಂದು ಭರವಸೆ ನೀಡಿದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಹಶೀಲ್ದಾರ್ ಎಂ.ನಾಗರಾಜು, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸರೆಡ್ಡಿ, ಜಿ.ಪಂ.ಮಾಜಿ ಉಪಾಧ್ಯಕ್ಷ ಚೆಂಡೂರು ವೆಂಕಟೇಶ್, ಆಹಾರ ನಿರೀಕ್ಷಕ ರಮೇಶ್, ತಾಲ್ಲೂಕಿನ ಸಾಕ್ಷರತಾ ಸಂಯೋಜಕ ಶಿವಪ್ಪ ಮುಖಂಡ ಭಾಸ್ಕರರೆಡ್ಡಿ ಮತ್ತಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.