ಬಾಗೇಪಲ್ಲಿ: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ ಬಂದು ಸ್ಪರ್ಧಿಸಿದರೂ ಹೆದರಲ್ಲ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ನಿಯೋಜಿತ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಭಾನುವಾರ ಹೇಳಿದರು. ಪಟ್ಟಣದಲ್ಲಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಕಚೇರಿ ಉದ್ಘಾಟಿಸಿ, ಜಾತಿ ಧರ್ಮ ಆಧಾರದ ಮೇಲೆ ಮತ ಕೇಳಲು ಬಂದಿಲ್ಲ.
ಕಳೆದ ಚುನಾವಣೆಯಲ್ಲಿ ಕೇಂದ್ರ ಸಚಿವ ವೀರಪ್ಪ ಮೊಯಿಲಿ 18 ಭರವಸೆಗಳನ್ನು ನೀಡಿದ್ದರು. ಆದರೆ ಅಧಿಕಾರ ಅವಧಿಯಲ್ಲಿ ಕನಿಷ್ಠ ಪಕ್ಷ ಒಂದೂ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದರು. ಸ್ಥಳೀಯ ಸಮಸ್ಯೆಗಳ ಬಗ್ಗೆ ಅರಿವಿದೆ. ಜನರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುತ್ತೇನೆ ಎಂದರು.
ಬಿಜೆಪಿ ಹಿರಿಯ ಮುಖಂಡರಾದ ಅಂಜಿನಪ್ಪ ಲಕ್ಷ್ಮೀಪತಿರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೌಡರೆಡ್ಡಿ, ಬಿಜೆಪಿ ಮಂಡಲ ಅಧ್ಯಕ್ಷ ಗೂಳೂರು ಲಕ್ಷ್ಮೀನಾರಾಯಣ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನರೆಡ್ಡಿ, ತಾಲ್ಲೂಕು ಮಹಿಳಾ ಘಟಕ ಅಧ್ಯಕ್ಷೆ ಮಂಜುಳಾಬಾಯಿ, ಜಿಲ್ಲಾ ಕಾರ್ಯದರ್ಶಿ ಮಂಜುಳಾ, ಜಿಲ್ಲಾ ಮಹಿಳಾ ಘಟಕ ಸದಸ್ಯೆ ಮಂಜುಳಮ್ಮ, ಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷ ಜಿ.ವಿ.ಕೃಷ್ಣಯ್ಯ, ಮುಖಂಡರಾದ ಪಿ.ವೆಂಕಟರಾಯಪ್ಪ, ಚೇಳೂರು ಚಂದ್ರಣ್ಣ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.