ADVERTISEMENT

ಎಸ್‌ಬಿಎಂ ಮುಂಭಾಗ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2012, 19:30 IST
Last Updated 21 ಆಗಸ್ಟ್ 2012, 19:30 IST

ಬಾಗೇಪಲ್ಲಿ: ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಬಾಗೇಪಲ್ಲಿ ಪಟ್ಟಣ ಶಾಖೆಯು ಗ್ರಾಹಕರಿಗೆ ಡಿಡಿ ಹಾಗೂ ಮೂಲ ಸೌಕರ್ಯ ಸಮರ್ಪಕವಾಗಿ ಒದಗಿಸುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರ ಬ್ಯಾಂಕ್ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯಗಳ ವಿದ್ಯುತ್ ಸರಬರಾಜು ಟೆಂಡರ್‌ಗೆ ಹಣ ತುಂಬಲು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆಯಲ್ಲಿ ಶನಿವಾರ ರೂ. 11 ಲಕ್ಷದ ಡಿ.ಡಿ ಕೇಳಲಾಗಿತ್ತು. ಬ್ಯಾಂಕ್ ಸಿಬ್ಬಂದಿ ಅವಧಿಯೊಳಗೆ ವಿತರಿಸದೆ ಟೆಂಡರ್ ಕೈತಪ್ಪಿದೆ. ಬ್ಯಾಂಕ್ ಅಧಿಕಾರಿಗಳ ವಿರುದ್ಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
 
ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿದ್ದು, ನಿವೃತ್ತ ಸರ್ಕಾರಿ ನೌಕರರು ಪಿಂಚಣಿ ಪಡೆಯಲು ಅಪಾರ ಸಂಖ್ಯೆಯಲ್ಲಿ ಬ್ಯಾಂಕ್‌ಗೆ ಆಗಮಿಸು ತ್ತಾರೆ. ಇಲ್ಲಿ ಸರತಿ ಸಾಲಿನಲ್ಲಿ ನಿಲ್ಲಲು ಸಾಧ್ಯವಾಗದ ಪರಿಸ್ಥಿತಿ ಇದೆ. ಕೂಡಲೇ ಮೂಲಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಬಂದ ಸಬ್‌ಇನ್ಸ್‌ಪೆಕ್ಟರ್ ಜೆ.ಎನ್.ಆನಂದ್‌ಕುಮಾರ್, ಸಮಸ್ಯೆಗಳನ್ನು ಬ್ಯಾಂಕ್ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಮುಂದಿನ ದಿನಗಳಲ್ಲಿ ಖುದ್ದು ಪರಿಶೀಲನೆ ನಡೆಸುವ ಭರವಸೆ ನೀಡಿದ್ದಾರೆ. ಅವಧಿಯೊಳಗೆ ಡಿ.ಡಿ ವಿತರಿಸದ ಅಧಿಕಾರಿಗಳ ವಿರುದ್ಧ  ಕ್ರಮ ತೆಗೆದು ಕೊಳ್ಳಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.