ADVERTISEMENT

ಕಳಪೆ ಕಾಮಗಾರಿ: ಶಾಸಕ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2011, 9:05 IST
Last Updated 19 ಸೆಪ್ಟೆಂಬರ್ 2011, 9:05 IST

ಶಿಡ್ಲಘಟ್ಟ: ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಗ್ರಾಮಸ್ಥರು ಕಾಮಗಾರಿಗಳ ಬಗ್ಗೆ ನಿಗಾವಹಿಸಬೇಕು. ಕಳಪೆ ಕಾಮಗಾರಿ ಕಂಡು ಬಂದಲ್ಲಿ, ತಕ್ಷಣವೇ ತಮಗೆ ಮಾಹಿತಿ ನೀಡಬೇಕು ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.

ತಾಲ್ಲೂಕಿನ ಕೊತ್ತನೂರು ಗ್ರಾಮದಲ್ಲಿ ಐದು ಲಕ್ಷ ರೂಪಾಯಿ ವೆಚ್ಚದ ಸಿಮೆಂಟ್ ರಸ್ತೆ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದ ಅವರು, `ಕಳಪೆ ಕಾಮಗಾರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಕಳಪೆ ಕಾಮಗಾರಿ ಆರೋಪ ಸಾಬೀತಾದಲ್ಲಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು~ ಎಂದರು.

`ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಹಂತಹಂತವಾಗಿ ಅನುದಾನ ಸದ್ಬಳಕೆ ಮಾಡಲಾಗುವುದು. ರಸ್ತೆ, ಚರಂಡಿ ಕಾಮಗಾರಿ ಕೈಗೊಳ್ಳಲಾಗುವುದು. ಗ್ರಾಮಸ್ಥರು ನಿತ್ಯ ಎದುರಿಸುತ್ತಿರುವ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು~ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎನ್.ವೇಣುಗೋಪಾಲ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ವಿ.ಸುಬ್ರಮಣಿ, ಆರ್.ಶ್ರಿನಿವಾಸ್, ದಲಿತ ಪ್ರಜಾಸೇನೆ ಉಪಾಧ್ಯಕ್ಷ ಕೆ.ಸಿ.ಜ್ಞಾನೇಶ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ದೇವರಾಜ್, ರೈಲ್ವೆ ಸಲಹಾ ಸಮಿತಿ ಸದಸ್ಯ ಮುನಿಕೃಷ್ಣಪ್ಪ, ಮುಖಂಡರಾದ ತೋಪಡ ನಾಗರಾಜ್, ಆಂಜಿನಪ್ಪ, ಕೃಷ್ಣಪ್ಪ, ರಾಜ್‌ಕುಮಾರ್, ಪ್ರಸಾದ್, ನರಸಿಂಹಮೂರ್ತಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.