ADVERTISEMENT

ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2011, 7:15 IST
Last Updated 10 ಮಾರ್ಚ್ 2011, 7:15 IST

ಚಿಕ್ಕಬಳ್ಳಾಪುರ: ತಾಲ್ಲೂಕು ಆಡಳಿತವು ಸರ್ಕಾರಿ ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಬುಧವಾರ ಆರಂಭಿಸಿತು. ತಾಲ್ಲೂಕಿನ ಗೋಪಾಲಕೃಷ್ಣ ಅಮಾನಿಕೆರೆ ಮತ್ತು ಮಂಚನಬಲೆ ಕೆರೆ ಒತ್ತುವರಿ ತೆರವು ಮಾಡಲಾಯಿತು. ಈ ಕಾರ್ಯಾಚರಣೆಯಿಂದ ಸುಮಾರು 100ಕ್ಕೂ ಹೆಚ್ಚು ಎಕರೆಯಷ್ಟು ಭೂಮಿ ಒತ್ತುವರಿ ತೆರವು ಮಾಡಲಾಗಿದೆ. ಅನೇಕರು ಇಲ್ಲಿ ಬೆಳೆ ಇಟ್ಟುಕೊಂಡು ಸ್ವಂತಕ್ಕಾಗಿ ಬಳಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿತ್ತು. ಅನೇಕ ಬಾರಿ ತಾಲ್ಲೂಕು ಆಡಳಿತದ ವತಿಯಿಂದ ತೆರವುಗೊಳಿಸುವಂತೆ ಸೂಚನೆ ನೀಡಿದ್ದರೂ ಪ್ರಯೋಜನ ಆಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ಬುಧವಾರ ಜೆಸಿಬಿ ಯಂತ್ರ ಬಳಸಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಒತ್ತುವರಿ ಮಾಡಿರುವ ಜಾಗದಲ್ಲಿ ಬೆಳೆದ ಬೆಳೆಯನ್ನು ರೈತರು ಕೊಯ್ಲು ಮಾಡಿ, ಒತ್ತುವರಿ ಜಾಗ ತೆರವುಗೊಳಿಸಬೇಕು ಎಂದು ತಹಶೀಲ್ದಾರ್ ಪೂರ್ಣಿಮಾ ತಿಳಿಸಿದ್ದಾರೆ. ಕಾನೂನು ಪಾಲಿಸದಿದ್ದರೆ ಅಂತಹವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು  ನೀಡಿದ್ದಾರೆ. ತಾಲ್ಲೂಕಿನ ಇತರೆ ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸಹ ಕೆಲವೇ ದಿನಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.