ADVERTISEMENT

ಕ್ರೀಡಾ ಮನೋಭಾವ ರೂಢಿಸಿಕೊಳ್ಳಲು ಸಲಹೆ

ಕ್ರೀಡಾ ಮನೋಭಾವ ರೂಢಿಸಿಕೊಳ್ಳಲು ಸಲಹೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2018, 6:02 IST
Last Updated 10 ಮಾರ್ಚ್ 2018, 6:02 IST
ಕಾರ್ಯಕ್ರಮದಲ್ಲಿ ಯುವಕ ಸಂಘಗಳ ಪದಾಧಿಕಾರಿಗಳಿಗೆ ಕ್ರೀಡಾ ಸಾಮಗ್ರಿ ವಿತರಿಸಲಾಯಿತು
ಕಾರ್ಯಕ್ರಮದಲ್ಲಿ ಯುವಕ ಸಂಘಗಳ ಪದಾಧಿಕಾರಿಗಳಿಗೆ ಕ್ರೀಡಾ ಸಾಮಗ್ರಿ ವಿತರಿಸಲಾಯಿತು   

ಚಿಕ್ಕಬಳ್ಳಾಪುರ: ‘ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳುವ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಸದೃಢವಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಯಲುವಹಳ್ಳಿ ಎನ್‌.ರಮೇಶ್‌ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವ ಸಮ್ಮೇಳನ ಮತ್ತು ಕಾರ್ಯಗಾರ ಹಾಗೂ ಯುವಕ ಸಂಘಗಳಿಗೆ ಕ್ರೀಡಾ ಸಾಮಗ್ರಿಗಳ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಯುವ ಜನರಿಗೆ ಅನೇಕ ಲಾಭಗಳು ಇವೆ. ಅವುಗಳ ಬಗ್ಗೆ ತರಬೇತುದಾರರ ಬಳಿ ಮಾಹಿತಿ ಪಡೆದುಕೊಳ್ಳಲು ಮುಂದಾಗಬೇಕು ಎಂದರು.

ADVERTISEMENT

ಇತ್ತೀಚಿನ ದಿನಗಳಲ್ಲಿ ಯುವಜನರು ಅನೇಕ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ದೇಶದ ಅಭಿವೃದ್ಧಿಗೆ ಮಾರಕವಾಗಿದೆ. ಪೋಷಕರು ಚಿಕ್ಕಂದಿನಿಂದಲೇ ಮಕ್ಕಳಿಗೆ ಕ್ರೀಡೆಗಳಲ್ಲಿ ಭಾಗವಹಿಸಲು ಉತ್ತೇಜಿಸಬೇಕು ಎಂದು ಹೇಳಿದರು.

ಕ್ರೀಡೆಯಲ್ಲಿ ಯುವಕರನ್ನು ಪ್ರೇರೇಪಿಸಲು ಸರ್ಕಾರ ಅನೇಕ ಸವಲತ್ತು ಒದಗಿಸುತ್ತಿದೆ. ಸರ್ಕಾರ ಕ್ರೀಡಾ ಇಲಾಖೆಗೆ ಕೋಟ್ಯಂತರ ಅನುದಾನ ಮೀಸಲಿಟ್ಟಿದೆ. ಯುವಜನರು ಅನುದಾನವನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಳ್ಳುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಗಳಿಸಬೇಕು ಎಂದು ತಿಳಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಎಂ.ಮುನಿಯಪ್ಪ ಮಾತನಾಡಿ, ಕ್ರೀಡೆ ನಿತ್ಯ ಜೀವನದ ಭಾಗವಾಗಬೇಕು. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತವಾಗಿರುತ್ತದೆ. ಯುವಕರಿಗೆ ಈಗಿನ ದಿನಗಳಲ್ಲಿ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶಗಳು ಹುಡುಕಿಕೊಂಡು ಬರುತ್ತಿದ್ದು, ಪ್ರತಿಯೊಬ್ಬರು ಇದರ ಪ್ರಯೋಜನ ಪಡೆದುಕೊಳ್ಳುವಂತಾಗಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿದ್ದಾರೆ. ಯುವಕರು ಅವರ ಸಹಕಾರ ಪಡೆಯಬೇಕು. ಕ್ರೀಡಾ ಇಲಾಖೆಯಲ್ಲಿ ಆಯೋಜಿಸುವ ಉಚಿತ ಕ್ರೀಡಾ ತರಬೇತಿ ಶಿಬಿರಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಹಿರಿಯ ಕ್ರೀಡಾಪಟು ಮಂಚನಬಲೆ ಶ್ರೀನಿವಾಸ್‌ ಮಾತನಾಡಿ, ‘ಅಂತರರಾಷ್ಟ್ರೀಯ ಆಟಗಳ ನಡುವೆ ದೇಶದ ಗ್ರಾಮೀಣ ಕ್ರೀಡೆಗಳು ಮಂಕಾಗುತ್ತಿವೆ. ಇವತ್ತಿನ ದಿನಗಳಲ್ಲಿ ಗ್ರಾಮೀಣ ಕ್ರೀಡೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಯುವಜನತೆ ಜವಾಬ್ದಾರಿ­ ವಹಿಸಿಕೊಳ್ಳಬೇಕು’ ಎಂದರು.

ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರುದ್ರಪ್ಪ, ಶಿವಪುತ್ರಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಪುತ್ರಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.