ADVERTISEMENT

ಗೌರಿಬಿದನೂರು: ಸಾಮೂಹಿಕ ವಿವಾಹ

​ಪ್ರಜಾವಾಣಿ ವಾರ್ತೆ
Published 27 ಜನವರಿ 2012, 11:50 IST
Last Updated 27 ಜನವರಿ 2012, 11:50 IST
ಗೌರಿಬಿದನೂರು: ಸಾಮೂಹಿಕ ವಿವಾಹ
ಗೌರಿಬಿದನೂರು: ಸಾಮೂಹಿಕ ವಿವಾಹ   

ಗೌರಿಬಿದನೂರು: ಸರಳ ವಿವಾಹಗಳು, ಅಂತರ್ಜಾತಿ ವಿವಾಹಗಳಿಂದ ಸಮಾಜದಲ್ಲಿನ ಜಾತಿ ಪದ್ದತಿ ನಿರ್ಮೂಲನೆಯಾಗಲಿದೆದೆ ಎಂದು ಸಮಾಜ ಸೇವಕ ಪಿ.ಎಸ್.ಮುರಳೀಧರ್ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಇಡಗೂರು ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಭಾರತ ಸಂವಿಧಾನ ಅರ್ಪಣಾ ದಿನಾಚರಣೆ ಅಂಗವಾಗಿ ಗುರುವಾರ ನಾಮಫಲಕದ ಉದ್ಘಾಟನೆ, ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

ನವ ದಂಪತಿಗಳು ಮಿತ ಸಂತಾನಕ್ಕೆ ಅದ್ಯತೆ ನೀಡಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಶ್ರೇಷ್ಠ ವ್ಯಕ್ತಿಗಳನ್ನಾಗಿ ಮಾಡುವಂತೆ ಸಲಹೆ ನೀಡಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಸತ್ಯಭದ್ರಾವತಿ ಮಾತನಾಡಿ, ಪ್ರಸ್ತುತ ರಾಜ್ಯ ಸರ್ಕಾರ ಗೊಂದಲದ ಹೇಳಿಕೆಗಳನ್ನು ನೀಡುವುದರ ಮೂಲಕ ದಲಿತ ಸಮುದಾಯವನ್ನು ದಿಕ್ಕುತಪ್ಪಿಸುತ್ತಿದೆ. ರಾಜ್ಯ ಬಿಜೆಪಿ ಸರ್ಕಾರ ದಲಿತ ವಿರೋಧಿ ನೀತಿಗಳನ್ನು ಅನುಸರಿಸು ತ್ತಿದೆ. ದಲಿತರ ಸಮಸ್ಯೆಗಳಿಗೆ ಸ್ಪಂದಿಸು ತ್ತಿಲ್ಲ ಎಂದು ಆರೋಪಿಸಿದರು.

ಇದೇ ಸಂದರ್ಭದಲ್ಲಿ 5 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಮಿತಿ ಮುಖಂಡರಾದ ಗಂಗಾಧರಪ್ಪ, ಕೆ.ನಂಜುಂಡಪ್ಪ, ವೆಂಕಟೇಶ್, ಭಾಗ್ಯಮ್ಮ ನಾರಾಯಣಸ್ವಾಮಿ, ಶಿವ ಶಂಕರ್, ಕೆ.ಜೆ.ನರಸಿಂಹಮೂರ್ತಿ, ಕದಿರಪ್ಪ, ವೆಂಕಟೆಶ್, ಮಾರೇಶ್, ಗಂಗಣ್ಣ, ವಕೀಲ ನರಸಿಂಹಮೂರ್ತಿ ಮತ್ತಿತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.