ADVERTISEMENT

ಚಿನ್ನಹಳ್ಳಿ ರಸ್ತೆ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2018, 6:18 IST
Last Updated 27 ಮಾರ್ಚ್ 2018, 6:18 IST
ಗುಡಿಬಂಡೆ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುವ ಚಿನ್ನಹಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭೂಮಿ ಪೂಜೆ ಸಲ್ಲಿಸಿದರು
ಗುಡಿಬಂಡೆ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುವ ಚಿನ್ನಹಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭೂಮಿ ಪೂಜೆ ಸಲ್ಲಿಸಿದರು   

ಗುಡಿಬಂಡೆ: ಕ್ಷೇತ್ರದ ಬಹುತೇಕ ಸಂಪರ್ಕ ರಸ್ತೆಗಳ ಅಭಿವೃದ್ಧಿ ಮಾಡಲಾಗಿದೆ. ಆ ಮೂಲಕ ಕಳೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನೀಡಲಾಗಿದ್ದ ಭರವಸೆ ಈಡೇರಿಸಿದಂತಾಗಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.

ತಾಲ್ಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುವ ಚಿನ್ನಹಳ್ಳಿ ರಸ್ತೆಯನ್ನು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ₹ 1.93 ಕೋಟಿ ರಸ್ತೆ ಕಾಮಗಾರಿಗೆ ಇತ್ತೀಚೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ‘ಹಲವಾರು ವರ್ಷಗಳಿಂದ ಅಭಿವೃದ್ಧಿ ಕಾಣದೆ ರಸ್ತೆ ಸಂಪೂರ್ಣವಾಗಿ ಹಾಳಾಗಿತ್ತು. ಇದೀಗ ಅವುಗಳಿಗೆ ಹೊಸ ರೂಪ ನೀಡಲಾಗಿದೆ. ಇದರಿಂದ ಗ್ರಾಮೀಣ ಭಾಗದ ಜನರ ಸಂಚಾರ, ಸಂಪರ್ಕ ವ್ಯವಸ್ಥೆಗೆ ಅನುಕೂಲ ಆಗಲಿದೆ’ ಎಂದರು.

ತಾಲ್ಲೂಕಿನ ಬ್ರಾಹ್ಮಣರಹಳ್ಳಿ ವೃತ್ತದಿಂದ ಚಿನ್ನಹಳ್ಳಿ, ಲಗುಮೇನಹಳ್ಳಿ ಮೂಲಕ ಇಡ್ರಹಳ್ಳಿ ಗ್ರಾಮದ ತನಕ ರಸ್ತೆ ಡಾಂಬರ್‌ ಹಾಕುವ ಕಾಮಗಾರಿ ಪ್ರಾರಂಭವಾಗಿದೆ. ಅನುದಾನ ತರವುದು ತಮ್ಮ ಕೆಲಸವಾದರೆ, ಉತ್ತಮ ಗುಣಮಟ್ಟದ ಕೆಲಸ ಸಾರ್ವಜನರಿಗೆ ಜವಾಬ್ದಾರಿಯಾಗಿದೆ ಎಂದರು.

ADVERTISEMENT

ಜನರು ಗುತ್ತಿಗೆದಾರರಿಗೆ ಉತ್ತಮ ಸಹಕಾರ ನೀಡಿ ಗುಣಮಟ್ಟದ ಕಾಮಗಾರಿ ಬಗ್ಗೆ ನಿಗಾ ವಹಿಸಬೇಕು. ಗುಣಮಟ್ಟದಲ್ಲಿ ಕಳಪೆ ಕಂಡುಬಂದಲ್ಲಿ ತಕ್ಷಣ ಕಾಮಗಾರಿ ನಿಲ್ಲಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ವಿಚಾರ ತಿಳಿಸಬೇಕು ಎಂದು ಹೇಳಿದರು.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಎಇಇ ನಾಗರಾಜ್, ಕೋಚಿಮುಲ್ ನಿರ್ದೇಶಕ ಅಶ್ವತ್ಥರೆಡ್ಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಹಳೆ ಗುಡಿಬಂಡೆ ನರಸಿಂಹರೆಡ್ಡಿ, ಉಲ್ಲೋಡು ಗ್ರಾಮ ಪಂಚಾಯತಿ ಅಧ್ಯಕ್ಷೆ ಅಂಜಿನಮ್ಮ ವೆಂಕಟೇಶಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.