ಗುಡಿಬಂಡೆ: ತಾಲ್ಲೂಕಿನಲ್ಲಿ ಕಾಲುಬಾಯಿ ರೋಗಕ್ಕೆ 74 ರಾಸುಗಳು ಸಾವನ್ನಪ್ಪಿದ್ದು, ಸರ್ಕಾರದಿಂದ ಪರಿಹಾರದ ಚೆಕ್ ವಿತರಿಸುವ ಬದಲು ಜಾನುವಾರುಗಳನ್ನು ನೀಡಿದ್ದರೆ ಉಪಯೋಗವಾಗುತ್ತಿತ್ತು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಸೋಮವಾರ ಕಾಲುಬಾಯಿ ಜ್ವರದಿಂದ ಸಾವನ್ನಪ್ಪಿದ 69 ರಾಸುಗಳಿಗೆ ಪರಿಹಾರದ ಚೆಕ್ ವಿತರಿಸಿ ಮಾತನಾಡಿದ ಅವರು, ಈ ಹಣವನ್ನು ರೈತರು ಹೈನುಗಾರಿಕೆಗೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ತಾಲ್ಲೂಕು ಬರಡು ನಾಡು.
ರೈತರು ಸಂಕಷ್ಟಕ್ಕೆ ಸಿಲುಕದಂತೆ ಅಧಿಕಾರಿಗಳು ಹೈನುಗಾರಿಕೆ ಉದ್ಯಮಕ್ಕೆ ಪ್ರೋತ್ಸಾಹ ನೀಡಿ ಎಂದು ಸೂಚಿಸಿದರು. ತಹಶೀಲ್ದಾರ್ ಎಸ್.ಶೈಲಜಾ ಮಾತನಾಡಿ ಒಟ್ಟು ₨16.65 ಲಕ್ಷದ ಪರಿಹಾರ ಚೆಕ್‌ಗಳನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ, ಕೋಲಾರ–ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನಿರ್ದೇಶಕ ಎನ್.ಅಶ್ವತ್ಥಪ್ಪ, ಉಪವ್ಯವಸ್ಥಾಪಕ ರಾಮಚಂದ್ರಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ನಾರಾಯಣಸ್ವಾಮಿ, ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ, ಸದಸ್ಯರಾದ ವೆಂಕಟನರಸಪ್ಪ, ಶ್ರೀನಿವಾಸ, ವೆಂಕಟರೋಣಪ್ಪ, ಅಬೀಬ್, ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ. ಸುಬ್ರಮಣಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.