ಚಿಕ್ಕಬಳ್ಳಾಪುರ: ಜನಸಂಖ್ಯೆಯು ಹೆಚ್ಚಾದಂತೆಲ್ಲ ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಗಳು ಉದ್ಭವಿಸುವುದಲ್ಲದೇ ಪರಿಸರದ ಮೇಲೆಯೂ ಗಂಭೀರ ಸ್ವರೂ ಪದ ಪರಿಣಾಮ ಬೀರಲಿದೆ ಎಂದು ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಎಸ್. ಶೇಖರಪ್ಪ ತಿಳಿಸಿದರು.
ವಿಶ್ವ ಜನಸಂಖ್ಯೆ ದಿನಾಚರಣೆ ಪ್ರಯುಕ್ತ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ನಿರೀಕ್ಷೆಗೂ ಮೀರಿ ಜನಸಂಖ್ಯೆಯೂ ಹೆಚ್ಚುತ್ತಿದ್ದು, ನಿಯಂತ್ರಣಕ್ಕೆ ಬಾರದಿರುವುದು ವಿಪರ್ಯಾಸ~ ಎಂದರು.
`ನೈಸರ್ಗಿಕ ಸಂಪನ್ಮೂಲ ಸಾಕಷ್ಟು ಪ್ರಮಾಣದಲ್ಲಿದ್ದ ಕಾರಣ ಹೆಚ್ಚಿನ ಕೊರತೆ ಮತ್ತು ತೊಂದರೆಯಾಗುತ್ತಿರಲಿಲ್ಲ~ ಎಂದು ಅವರು ಹೇಳಿದರು.`ಒಂದೆಡೆ ಜನಸಂಖ್ಯೆಯು ಹೆಚ್ಚುತ್ತಿದ್ದರೆ, ಮತ್ತೊಂದೆಡೆ ನೈಸರ್ಗಿಕ ಸಂಪನ್ಮೂಲ ಕಡಿಮೆಯಾಗುತ್ತಿದೆ. ಪರಿಸರ ಮಾಲಿನ್ಯ ಹೆಚ್ಚುವುದರ ಜೊತೆಗೆ ಅರಣ್ಯನಾಶವಾಗುತ್ತದೆ. ಇದೇ ರೀತಿಯ ಪರಿಸ್ಥಿತಿ ಮುಂದುವರೆದ್ದಲ್ಲಿ, ಮುಂದಿನ ದಿನಗಳಲ್ಲಿ ಆಹಾರದ ಸಮಸ್ಯೆಯೂ ತಲೆದೋರಲಿದೆ~ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾ ಯಿತಿ ಅಧ್ಯಕ್ಷ ಎಂ.ವಿ.ಕೃಷ್ಣಪ್ಪ ಮಾತನಾಡಿ ದರು.ಜನಸಂಖ್ಯೆ ಸ್ಫೋಟದ ಕುರಿತು ವಿಶೇಷ ಉಪನ್ಯಾಸ ನೀಡಿದ ಶಿಕ್ಷಣ ತಜ್ಞ ಪ್ರೊ. ಕೋಡಿರಂಗಪ್ಪ ಮಾತನಾಡಿದರು.ಶಾಸಕ ಕೆ.ಪಿ.ಬಚ್ಚೇಗೌಡ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಭಕ್ತ ವತ್ಸಲಂ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವೈದ್ಯನಾಥನ್, ತಾಲ್ಲೂಕು ಆರೋ ಗ್ಯಾಧಿಕಾರಿ ಡಾ. ಮಿತ್ರಣ್ಣ, ಆರ್‌ಸಿಎಚ್ ಅಧಿಕಾರಿ ಡಾ.ಮೋಹನ್‌ಬಾಬು, ಜಿಲ್ಲಾ ಕುಷ್ಠ ರೋಗಾಧಿಕಾರಿ ಡಾ.ಮದನಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಹರೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.