ADVERTISEMENT

ತಂಬಾಕು ಹಾನಿ ಬಗ್ಗೆ ಜಾಗೃತಿ ಮೂಡಿಸಿ

​ಪ್ರಜಾವಾಣಿ ವಾರ್ತೆ
Published 4 ಮೇ 2012, 6:20 IST
Last Updated 4 ಮೇ 2012, 6:20 IST

ಚಿಕ್ಕಬಳ್ಳಾಪುರ: ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಿಯಾಗಿದ್ದು, ತಂಬಾಕು ಸೇವನೆ ತ್ಯಜಿಸಬೇಕು ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ಜೆ.ಜೆಟ್ಟಣ್ಣವರ ತಿಳಿಸಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನಗರದಲ್ಲಿ ಗುರುವಾರ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಾತನಾಡಿ, `ತಂಬಾಕು ಸೇವನೆ ಬಗ್ಗೆ ಜಾಗೃತಿ ಮೂಡಿಸಬೇಕು~ ಎಂದರು.

ವಕೀಲ ಎಂ.ಜಯರಾಮರೆಡ್ಡಿ ಮಾತನಾಡಿ, `ತಂಬಾಕು ಸೇವನೆಯಿಂದ ಜೀವನ ಪೂರ್ತಿ ಅನಾರೋಗ್ಯದಿಂದ ಬಳಲಬೇಕಾಗುತ್ತದೆ ಎಂದು ಎಚ್ಚರಿಸಿದರು.ತ್ವರಿತಗತಿ ನ್ಯಾಯಾಧೀಶ ಜಿ.ಬಿ.ಮುದಿಗೌಡರ, ವಕೀಲರ ಸಂಘದ ಅಧ್ಯಕ್ಷ ಕೆ.ಎಚ್.ತಮ್ಮೇಗೌಡರು, ಶಿಡ್ಲಘಟ್ಟ ವಕೀಲರ ಸಂಘದ ಅಧ್ಯಕ್ಷ ಪಾಪಿರೆಡ್ಡಿ, ಜಿಲ್ಲಾ ನಿರ್ವಹಣಾ ಅಧಿಕಾರಿ ಡಾ. ಎನ್.ವೆಂಕಟೇಶ್, ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ತಜ್ಞರಾದ ಡಾ.ಡಿ.ಆರ್.ಶಿವಪ್ಪ ಮತ್ತು ಡಾ.ಕಿಶೋರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.