ಗೌರಿಬಿದನೂರು: ಜಾತಿ, ಧರ್ಮದ ಹೆಸರಿನಲ್ಲಿ ಮಾನವ ಸಮಾಜವನ್ನು ಒಡೆಯಲಾಗುತ್ತಿದ್ದು, ಮಾನವನ ಮೂಲಹಕ್ಕುಗಳನ್ನು ನಾಶಪಡಿಸ ಲಾಗುತ್ತಿದೆ ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ಬಿ.ಎನ್.ಗಂಗಾಧರಪ್ಪ ತಿಳಿಸಿದರು.
ತಾಲ್ಲೂಕಿನ ತೊಂಡೇಬಾವಿ ಹೋಬಳಿ ರಾಯ ರೇಖಲಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಕಾರ್ಯ ಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಗ್ರಾಮ ಶಾಖೆ ನಾಮಫಲಕ ಉದ್ಘಾಟಿಸಿ ಮಾತನಾಡಿದರು.
`ಅಂಬೇಡ್ಕರ್ ಅವರ ತತ್ವ, ಸಿದ್ಧಾಂತ ಮತ್ತು ಆದರ್ಶದ ಮೇಲೆ 1970ರಲ್ಲಿ ಪ್ರೊ. ಬಿ. ಕೃಷ್ಣಪ್ಪ ಅವರು ದಲಿತ ಸಂಘರ್ಷ ಸಮಿತಿ ಕಟ್ಟಿದರು. ದಲಿತರ ಹಕ್ಕು, ಭೂಮಿ, ಆರ್ಥಿಕ ಅಭಿವೃದ್ಧಿ ಮುಂತಾ ದವುಗಳಿಗಾಗಿ ಸಮಿತಿ ವತಿಯಿಂದ ಹೋರಾಟ ನಡೆಸಿದರು~ ಎಂದರು.
ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಸದಸ್ಯ ಕೆ.ನಂಜುಂಡಪ್ಪ ಮಾತನಾಡಿ, `ತಾಲ್ಲೂಕಿನ ಎಲ್ಲಾ ದಲಿತ ಕಾಲೊನಿಗಳು ಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿವೆ. ನೀರು, ಚರಂಡಿ, ರಸ್ತೆ ಮುಂತಾದ ಸೌಕರ್ಯಗಳನ್ನು ಪೂರೈಸಬೇಕಿದೆ~ ಎಂದರು.
ದಲಿತ ಸಂಘರ್ಷ ಸಮಿತಿ ಮುಖಂಡರಾದ ವೆಂಕಟೇಶ್, ಲಕ್ಷ್ಮಿನಾರಾಯಣ, ಜಿ.ಗಂಗಣ್ಣ, ಬಾಲಕೃಷ್ಣ, ಶಿವಶಂಕರ್, ಅಂಜಿ, ವೆಂಕಟೇಶ್, ಗಂಗಾಧರಮೂರ್ತಿ, ರಾಮಕೃಷ್ಣ, ರಮೇಶ್, ಮಲ್ಲಪ್ಪ, ನರಸಿಂಹಮೂರ್ತಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.