ADVERTISEMENT

ನೀರಾವರಿ ಅನುದಾನ ಶೀಘ್ರ ಬಿಡುಗಡೆ: ಸಿ.ಎಂ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2013, 8:49 IST
Last Updated 21 ಸೆಪ್ಟೆಂಬರ್ 2013, 8:49 IST

ಚಿಕ್ಕಬಳ್ಳಾಪುರ: ಎತ್ತಿನಹೊಳೆ ಮತ್ತು ಪರಮಶಿವಯ್ಯ ವರದಿಯಾಧಾರಿತ ನೀರಾ­ವರಿ ಯೋಜನೆ ಅನುಷ್ಠಾನ­ಗೊಳಿಸಲು ಸರ್ಕಾರ ಬದ್ಧವಾಗಿದ್ದು, ವಿಸ್ತೃತಾ ಯೋಜನಾ ವರದಿ­ಯಾಧರಿಸಿ ಶೀಘ್ರವೇ ನೀರಾವರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯ­ಮಂತ್ರಿ ಸಿದ್ದರಾಮಯ್ಯ
ಘೋಷಿ­ಸಿದರು.

ನಗರದ ನಂದಿರಂಗಮಂದಿರದಲ್ಲಿ ಶುಕ್ರವಾರ ನಡೆದ ಜಿಲ್ಲಾಡಳಿತ ಭವನ, ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ, ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ಚಿಂತಾಮಣಿ 1 ಮತ್ತು 2ನೇ ಮಹಡಿಯ ಶಂಕುಸ್ಥಾಪನೆ ಕಾರ್ಯ­ಕ್ರಮಕ್ಕೆ ಚಾಲನೆ ನೀಡಿ, ನೀರಿಗಾಗಿ ಜಿಲ್ಲೆಯ ಜನರು ಸಲ್ಲಿಸಿದ ಮನವಿಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಾಗುವುದು ಎಂದರು.

ಚಿಕ್ಕಬಳ್ಳಾಪುರ–ಕೋಲಾರ ಮುಂತಾದ ಬಯಲುಸೀಮೆ ಜಿಲ್ಲೆಗಳು ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದೆ. ನೀರಾವರಿ ಯೋಜನೆ ಜಾರಿಗೊಳಿಸಲು ಪ್ರಥಮ ಆದ್ಯತೆ ನೀಡುತ್ತಿದೆ. ಅದಕ್ಕಾಗಿ ಬಜೆಟ್‌ನಲ್ಲಿ ಅನುದಾನ ಕೂಡ ಮೀಸಲಿಡ­­ಲಾಗಿದೆ ಎಂದು ಹೇಳಿದರು.

ನಗರದಲ್ಲಿ ನಿರ್ಮಾಣ ಹಂತ­ದಲ್ಲಿ­ರುವ ಹೈಟೆಕ್‌ ಸರ್ಕಾರಿ ಆಸ್ಪತ್ರೆ  ಹಾಸಿಗೆ­ಗಳ ಸಾಮರ್ಥ್ಯವನ್ನು 300ಕ್ಕೆ ಏರಿಸಿ, ಮುಂದಿನ ವರ್ಷ ಜಿಲ್ಲೆಗೊಂದು ವೈದ್ಯ­ಕೀಯ ಕಾಲೇಜು ಘೋಷಿಸಲಾಗುವುದು ಎಂದರು.

ಕರ್ನಾಟಕ ಹಾಲು ಮಹಾ­ಮಂಡಳಿಯ ಮೆಗಾ ಡೇರಿ ನಿರ್ಮಾಣಕ್ಕೆ ಬಾಕಿಯಿರುವ ಅನುದಾನ­ವನ್ನೂ ಸಹ ಹಂತಹಂತವಾಗಿ ಬಿಡುಗಡೆ ಮಾಡ­ಲಾಗು­ವುದು ಎಂದು ಅವರು ತಿಳಿಸಿದರು.

ಕೇಂದ್ರ ಸಚಿವರಾದ ಎಂ.ವೀರಪ್ಪ ಮೊಯಿಲಿ, ಕೆ.ಎಚ್‌.ಮುನಿಯಪ್ಪ, ಸಚಿವ­­ರಾದ ವಿ.ಶ್ರೀನಿವಾಸ್‌ ಪ್ರಸಾದ್‌, ಎಚ್‌.ಕೆ.­ಪಾಟೀಲ್‌, ದಿನೇಶ್‌ ಗುಂಡೂ­ರಾವ್‌, ರಾಮ­ಲಿಂಗಾ­ರೆಡ್ಡಿ, ಶಾಸಕರಾದ ಎನ್‌.ಎಚ್‌.­ಶಿವಶಂಕರ ರೆಡ್ಡಿ, ಡಾ.ಕೆ.­ಸುಧಾಕರ್‌, ಜೆ.ಕೆ.ಕೃಷ್ಣಾರೆಡ್ಡಿ, ಎಂ.­ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.