ADVERTISEMENT

ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡಿ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2017, 7:00 IST
Last Updated 22 ನವೆಂಬರ್ 2017, 7:00 IST

ಗೌರಿಬಿದನೂರು: ‘ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ಪ್ರದೇಶದ ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡಿದರೆ ಮಾತ್ರ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ’ ಎಂದು ಪುರಸಭೆ ಅಧ್ಯಕ್ಷ ಕಲೀಂಉಲ್ಲಾ ತಿಳಿಸಿದರು.

ತಾಲ್ಲೂಕಿನ ಶ್ರೀರಾಮಕೃಷ್ಣ ಶಾರದಾದೇವಿ ವಿದ್ಯಾಮಂದಿರದ ಶಾಲಾ ಮಕ್ಕಳು ಪಟ್ಟಣದ ಬಿ.ಎಚ್. ರಸ್ತೆಯಲ್ಲಿ ಈಚೆಗೆ ಆಯೋಜಿಸಿದ್ದ ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸ್ವಚ್ಛತೆ ಕಾಪಾಡುವಲ್ಲಿ ಪುರಸಭೆ ಸಿಬ್ಬಂದಿಯೊಂದಿಗೆ ನಾಗರಿಕರು ಕೈ ಜೋಡಿಸಿದಾಗ ಮಾತ್ರ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಇತ್ತೀಚಿನ ದಿನಗಳಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಜನರಲ್ಲಿಅನೇಕ ಕಾಯಿಲೆಗಳು ಅನುಭವಿಸಬೇಕಾಗುತ್ತಿದೆ. ಸುಂದರ ಆರೋಗ್ಯಕರ ವಾತವರಣ ನಿರ್ಮಿಸಲು ಪ್ರತಿಯೊಬ್ಬರೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಶಾಲಾ ಹಂತದಲ್ಲಿ ಪೋಷಕರು ಮಕ್ಕಳಿಗೆ ಸ್ವಚ್ವತೆಯ ಬಗ್ಗೆ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.

ADVERTISEMENT

ಪಟ್ಟಣದ ಬಿ.ಎಚ್. ರಸ್ತೆ, ನಾಗಯ್ಯರೆಡ್ಡಿ ವೃತ್ತದಿಂದ ವಾಲ್ಮೀಕಿ ವೃತ್ತದವರೆಗೂ ಸ್ವಚ್ಛ ಮಕ್ಕಳು ಸ್ವಚ್ಛ ಮಾಡಿದರು. ಶಾಲಾ ಆಡಳಿತಾಧಿಕಾರಿ ಪ್ರಶಾಂತ್, ಷಾ ಇನಾಯಿತ್ ಮಸೀದಿ ಆಡಳಿತ ಮಂಡಳಿ ಕಾರ್ಯದರ್ಶಿ ದಸ್ತಗಿರಿಸಾಬ್,ಎಎಸ್ಐ ಮುರಳೀಧರ್, ಶಿಕ್ಷಕರಾದ ನಾರಾಯಣಸ್ವಾಮಿ, ಮಹೇಶ್, ಶ್ರೀನಿವಾಸ್, ಕಲೈವಾಣಿ, ಪ್ರಭು ಹಾಜರಿದ್ದರು.

* * 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.