ADVERTISEMENT

ಬಯಲುಸೀಮೆಗೆ ನೀರು: ಮುನಿಯಪ್ಪ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2013, 9:59 IST
Last Updated 24 ಏಪ್ರಿಲ್ 2013, 9:59 IST

ಶಿಡ್ಲಘಟ್ಟ: ಬಯಲು ಸೀಮೆ ಪ್ರದೇಶ ಗಳಾದ ಅವಿಭಾಜಿತ ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರಾವರಿ ತಜ್ಞ ಡಾ.ಪರಮಶಿವಯ್ಯ ಶಾಶ್ವತ ನೀರಾವರಿ ಯೋಜನೆ ಅನುಷ್ಟಾನ ಗೊಳಿಸಲು  ಬದ್ದರಾಗಿದ್ದೇವೆ ಎಂದು ಕೇಂದ್ರ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕಾ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ತಾಲ್ಲೂಕಿನ ಜಂಗಮಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಮುನಿಯಪ್ಪ ಪರವಾಗಿ ಮಂಗಳವಾರ ಚುನಾವಣೆ ಪ್ರಚಾರ ನಡೆಸಿ ಮಾತನಾಡಿದ ಅವರು ಈ ಹಿಂದೆ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತಿ ಹೆಚ್ಚು ಮತ ನೀಡಿದ ಕೀರ್ತಿ ತಾಲ್ಲೂಕಿನ ಜಂಗಮಕೋಟೆ ಹೋಬಳಿಗೆ ಸಲ್ಲುತ್ತದೆ ಎಂದರು.

ಕಳೆದ ಹತ್ತು ವರ್ಷದಿಂದ ಜೆಡಿಎಸ್ ಹಾಗೂ ಬಿಜೆಪಿ ಸರ್ಕಾರದ ದುರಾಡಳಿತದಿಂದ ಬೇಸತ್ತಿರುವ ರಾಜ್ಯದ ಜನತೆ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಲಿದ್ದಾರೆ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಶಾಸಕ ವಿ.ಮುನಿಯಪ್ಪ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಅಧಿಕಾರವನ್ನು ನಡೆಸಿದ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಕುಟುಂಬ ರಾಜಕಾರಣ ಮಾಡಿಕೊಂಡು ಬರುತ್ತಿರುವ ಜೆಡಿಎಸ್ ಪಕ್ಷದಿಂದ ಬಯಲು ಸೀಮೆಯ ಭಾಗಗಳಿಗೆ ಯಾವುದೆ ಪ್ರಯೋಜನಗಳಿಲ್ಲ ಎಂದರು.

ಕಾಂಗ್ರೆಸ್ ಮುಖಂಡರಾದ ಕೆ.ಗುಡಿಯಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ಸತೀಶ್, ಎಸ್.ಎಂ. ನಾರಾಯಣಸ್ವಾಮಿ, ತಮ್ಮಣ್ಣ, ಎಚ್. ಎಂ.ಮುನಿಯಪ್ಪ, ಶ್ರೀನಿವಾಸ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.