ADVERTISEMENT

ಮಕ್ಕಳಿಗೆ ಉಚಿತ ಶಿಕ್ಷಣ ಸಿಗಲಿ

​ಪ್ರಜಾವಾಣಿ ವಾರ್ತೆ
Published 9 ಜುಲೈ 2012, 9:40 IST
Last Updated 9 ಜುಲೈ 2012, 9:40 IST

ಚಿಕ್ಕಬಳ್ಳಾಪುರ: ಬಡತನ ಮತ್ತು ಇನ್ನಿತರ ಸಮಸ್ಯೆಗಳಿಂದಾಗಿ ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತರಾಗಿರುವ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡಬೇಕಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ಸರ್ಕಾರ ರೂಪಿಸಿರುವ ಸೌಲಭ್ಯಗಳು ಮಕ್ಕಳಿಗೆ ತಲುಪಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ತಿಳಿಸಿದರು.

ನಗರದ ನಂದಿ ರಂಗಮಂದಿರದ ಆವರಣದಲ್ಲಿ ಭಾನುವಾರ ಸಾಯಿಕೃಷ್ಣ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನಡೆದ ಬಸ್‌ಪಾಸ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ಬಹುತೇಕ ಮಕ್ಕಳು ಶಿಕ್ಷಣ ಸಿಗದೆ ಬಾಲ ಕಾರ್ಮಿಕರಾಗುತ್ತಿದ್ದಾರೆ. ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿಲ್ಲ~ ಎಂದು ವಿಷಾದಿಸಿದರು.

`ಸರ್ಕಾರವಲ್ಲದೆ ಸಂಘ-ಸಂಸ್ಥೆಗಳು ಸಹ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ಒದಗಿಸುವ ಜೊತೆಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹ ಪ್ರಮುಖ ಪಾತ್ರ ವಹಿಸಬೇಕು. ಇದು ಪ್ರತಿಯೊಬ್ಬರ ಜವಾಬ್ದಾರಿ~ ಎಂದು ಅವರು ಹೇಳಿದರು.

ವಿಧಾನ ಪರಿಷತ್‌ನ ಮಾಜಿ ಸಭಾಧ್ಯಕ್ಷ ಬಿ.ಎಲ್.ಶಂಕರ್, ಸಾಯಿಕೃಷ್ಣ ಚಾರಿಟೆಬಲ್ ಟ್ರಸ್ಟ್‌ನ ವ್ಯವಸ್ಥಾಪಕ ಕೆ.ಸುಧಾಕರ್, ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.