ADVERTISEMENT

ಮತದಾರರ ವಿಶ್ವಾಸದಿಂದ ಶಾಸಕನಾಗಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2013, 10:33 IST
Last Updated 9 ಡಿಸೆಂಬರ್ 2013, 10:33 IST

ಗೌರಿಬಿದನೂರು: ತಾಲ್ಲೂಕಿನಲ್ಲಿ ನಾಲ್ಕು ಬಾರಿ ಶಾಸಕನಾಗಬೇಕಾದರೆ ಮತದಾರರು ಕಾರಣ. ಎಲ್ಲಿವರೆಗೂ ಮತದಾರರು ತಮ್ಮ ಮೇಲೆ ವಿಶ್ವಾಸ ಇಟ್ಟಿರುತ್ತಾರೋ ಅಲ್ಲಿ­ವರೆಗೂ ಶಾಸಕ­ನಾಗಿರಲು ಸಾಧ್ಯ ಎಂದು ವಿಧಾನಸಭಾ ಉಪಾಧ್ಯಕ್ಷ ಎನ್.­ಎಚ್.­ಶಿವಶಂಕರರೆಡ್ಡಿ ಅಭಿಪ್ರಾಯಪಟ್ಟರು.

ಪಟ್ಟಣದ ಎಇಎಸ್ ನ್ಯಾಷನಲ್ ಕಾಲೇಜಿನ ಆವರಣದಲ್ಲಿ ತಾಲ್ಲೂಕು ನಾಯಕ ಸಂಘ ಭಾನುವಾರ ಆಯೋಜಿ­ಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಮತದಾರರು ಪ್ರಜ್ಞಾವಂತರು ಎಂದರು.

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಾದನಹಳ್ಳಿ ಕೆರೆಯಲ್ಲಿ ₨2 ಕೋಟಿ ವೆಚ್ಚದಲ್ಲಿ ವಸತಿ ನಿಲಯದ ಕಟ್ಟಡ ನಿರ್ಮಾಣವಾಗುತ್ತಿದೆ. ವಾಟದ ಹೊಸಹಳ್ಳಿ ಬಳಿ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ 10 ಎಕರೆಯಲ್ಲಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ಮಾದನ­ಹಳ್ಳಿ ಕೆರೆಯಲ್ಲಿ ₨ 50 ಲಕ್ಷ ವೆಚ್ಚದಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದು, ಮುಂದಿನ ವಾಲ್ಮೀಕಿ ಜಯಂತಿಯನ್ನು ನೂತನ ಕಟ್ಟಡದಲ್ಲಿ ಆಚರಿಸಬೇಕು ಎಂದರು.

ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ಎನ್.ಬಾಬಣ್ಣ ಮಾತನಾಡಿ, ಜನಸಂಖ್ಯೆ ಆಧಾರದ ಮೇಲೆ ಕನಿಷ್ಟ ಶೇ 7ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ನಾರಾಯಣಸ್ವಾಮಿ ಅವರನ್ನು ಸನ್ಮಾನಿ­ಸ­ಲಾಯಿತು. ಪುರಸಭೆ ಮಾಜಿ ಅಧ್ಯಕ್ಷ ಆರ್.ಅಶೋಕ್ ಕುಮಾರ್, ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ನಾಗರಾಜಪ್ಪ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ವೇಣು­ಗೋಪಾಲ್, ನಿವೃತ್ತ ಕಾರ್ಯ ನಿರ್ವಾಹ­ಣಾಧಿಕಾರಿ ರಾಜಾರಾಂ, ಪ್ರಾಧ್ಯಾಪಕ ಡಾ.ಎಂ.ಹನುಮಂತಪ್ಪ, ನಿವೃತ್ತ ಉಪ ವಿಭಾಗಾಧಿಕಾರಿ ಭಕ್ತರಾಮೇಗೌಡ, ಎಇಎಸ್ ನ್ಯಾಷ­ನಲ್ ಕಾಲೇಜಿನ ಉಪ ಪ್ರಾಂಶುಪಾಲ ಎಂ.ವಿ.ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ­ದೇವಮ್ಮ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಜೆ.ಚಂದ್ರ­ಮೋಹನ್, ಯುವ ಸಾಹಿತಿ ಮ.ನ.ಕೃಷ್ಣ­ಮೂರ್ತಿ, ಸಂಘದ ಉಪಾಧ್ಯಕ್ಷ ಕರೇ­ತಿಮ್ಮಯ್ಯ, ಕಾರ್ಯದರ್ಶಿ ಆನಂದ್, ಬೈಚಾಪುರ ಗಂಗಾಧರ, ವೆಂಕಟೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.