ADVERTISEMENT

ವೈಜ್ಞಾನಿಕ ಕೃಷಿ ಎಂದಿಗೂ ಲಾಭದಾಯಕ

ಕೃಷಿ ಸಂಬಂಧಿತ ಇಲಾಖೆಗಳಿಂದ ಸಮಗ್ರ ಕೃಷಿಗೆ ಒತ್ತು ನೀಡಲಾಗುವುದು

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2016, 9:08 IST
Last Updated 4 ಆಗಸ್ಟ್ 2016, 9:08 IST
ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ  ಕೃಷಿ ಇಲಾಖೆ ಹಾಗೂ ಇಕ್ರೀಸ್ಯಾಟ್ ಅಂತರರಾಷ್ಟ್ರೀಯ ಸಂಸ್ಥೆ ಹಾಗೂ ಕೃಷಿ ವಿಶ್ವ ವಿದ್ಯಾಲಯ ಸಹಹಯೋಗದಲ್ಲಿ ಬುಧವಾರ  ಹಮ್ಮಿಕೊಳ್ಳಲಾಗಿದ್ದ ‘ಸುವರ್ಣ ಕೃಷಿ ಗ್ರಾಮ ಯೋಜನೆ’ ಅಡಿ ಕೃಷಿ ಸಚಿವ ಬೈರೇಗೌಡ ಚೀಗಟಗೆರೆ ಗ್ರಾಮದಲ್ಲಿ ಕಾಂಪೋಸ್ಟ್ ಗೊಬ್ಬರ ತಯಾರಿಕಾ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ವಿಧಾನಸಭಾ ಉಪಾಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ ಇದ್ದರು
ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ಕೃಷಿ ಇಲಾಖೆ ಹಾಗೂ ಇಕ್ರೀಸ್ಯಾಟ್ ಅಂತರರಾಷ್ಟ್ರೀಯ ಸಂಸ್ಥೆ ಹಾಗೂ ಕೃಷಿ ವಿಶ್ವ ವಿದ್ಯಾಲಯ ಸಹಹಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ‘ಸುವರ್ಣ ಕೃಷಿ ಗ್ರಾಮ ಯೋಜನೆ’ ಅಡಿ ಕೃಷಿ ಸಚಿವ ಬೈರೇಗೌಡ ಚೀಗಟಗೆರೆ ಗ್ರಾಮದಲ್ಲಿ ಕಾಂಪೋಸ್ಟ್ ಗೊಬ್ಬರ ತಯಾರಿಕಾ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ವಿಧಾನಸಭಾ ಉಪಾಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ ಇದ್ದರು   

ಗೌರಿಬಿದನೂರು: ‘ರೈತರು ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಉತ್ತಮ ಆದಾಯ ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು  ಕೃಷಿ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ಪಟ್ಟಣದ ನೇತಾಜಿ ಕ್ರೀಡಾಂಗಣದಲ್ಲಿ  ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಕ್ರೀಸ್ಯಾಟ್ ಅಂತರರಾಷ್ಟ್ರೀಯ ಸಹಬಾಗಿತ್ವ ಸಂಸ್ಥೆ ಹಾಗೂ ಕೃಷಿ ವಿಶ್ವ ವಿದ್ಯಾಲಯ ಸಹ ಭಾಗಿತ್ವದಲ್ಲಿ ಬುಧವಾರ  ‘ಸುವರ್ಣ ಕೃಷಿ ಗ್ರಾಮ’ ಯೋಜನೆ ಉದ್ಘಾಟಿಸಿ ಮಾತನಾಡಿದರು.

‘ ಕೃಷಿ ಬಿಡದೆ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಕೃಷಿ ಮಾಡಿದರೆ ಯಾವುದೇ ಕಾರಣಕ್ಕೂ ನಷ್ಟವಾಗುವುದಿಲ್ಲ. ನಮ್ಮ ಸರ್ಕಾರ ಪ್ರಚಾರ ಗಿಟ್ಟಿಸಿಕೊಳ್ಳಲು ಯಾವುದೇ ಕಾರ್ಯಕ್ರಮ ಜಾರಿಗೊಳಿಸುತ್ತಿಲ್ಲ. ರೈತರಿಗೆ ಶಾಶ್ವತವಾದ ಯೋಜನೆ ಜಾರಿಗೊಳಿಸಿದೆ’ ಎಂದು ತಿಳಿಸಿದರು.

‘ಕೃಷಿ ಭಾಗ್ಯ, ಭೂ ಸಂಮೃದ್ಧಿ ಯೋಜನೆ ಸಂಪೂರ್ಣ ಯಶಸ್ವಿಯಾಗಿದೆ. ರೈತರು ಸುವರ್ಣ ಕೃಷಿ ಗ್ರಾಮ ಯೋಜನೆಯಡಿ ನಾಲ್ಕು ವರ್ಷದಲ್ಲಿ ಕೃಷಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು’ ಎಂದರು.

‘ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳಿಂದ ಸಮಗ್ರ ಕೃಷಿಗೆ ಒತ್ತು ನೀಡುವ ಸಲುವಾಗಿ ಮಣ್ಣು ಪರೀಕ್ಷೆ, ಸಮಗ್ರ ಪೋಷಕಾಂಶಗಳ ನಿರ್ವಹಣೆ, ಆಧುನಿಕ ಕೃಷಿ ಯತ್ರೋಪಕರಣಗಳ ಬಳಕೆ, ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ, ಮೌಲ್ಯವರ್ಧನೆ ಮತ್ತು ರೈತರು ಬೆಳೆದ ಉತ್ಪನ್ನಗಳಿಗೆ ಮಾರುಕಟ್ಟೆ ಉತ್ತೇಜನ ನೀಡಿ ಅನುಷ್ಠಾನಗೊಳಿಸುವ ಮೂಲಕ ಸುವರ್ಣ ಗ್ರಾಮವನ್ನಾಗಿ ಮಾಡಲಾಗುವುದು’ ಎಂದರು.

ವಿಧಾನಸಭಾ ಉಪಾಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ ಮಾತನಾಡಿ ‘ಕೃಷಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆ ‘ಸುವರ್ಣ ಕೃಷಿ ಗ್ರಾಮ ಯೋಜನೆ’ ಸಣ್ಣ ಅತಿ ಸಣ್ಣ ರೈತರ ಆರ್ಥಿಕ ಮಟ್ಟ ಸುಧಾರಿಸಲು ಪ್ರಮುಖ ಪಾತ್ರ ವಹಿಸಲಿದೆ. ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ವ್ಯವಸ್ಥಿತವಾಗಿ ಬೇಸಾಯ ಮಾಡಿದ್ದೇ ಆದರೆ ಯಾವುದೇ ಕಾರಣಕ್ಕೂ ನಷ್ಟ ಅನುಭವಿಸಲು ಸಾಧ್ಯವಿಲ್ಲ. ಇಂದಿನ ಆರೋಗ್ಯದ ದೃಷ್ಟಿಯಿಂದ ಸಿರಿ ಧಾನ್ಯಗಳಿಗೆ ಹೆಚ್ಚು ಬೇಡಿಕೆ ಇರುವುದರಿಂದ ರೈತರು ಇಂತಹ ಬೆಳೆ ಬೆಳೆಯಬಹುದು’ ಎಂದರು.

ವಿವಿಧ ಇಲಾಖೆಗಳಿಂದ ರೈತರ ಮಾಹಿತಿಗಾಗಿ ಕೃಷಿ ವಸ್ತು ಪ್ರದರ್ಶನದ ಮಳಿಗೆ ತೆರೆಯಲಾಗಿತ್ತು. ಹೈದರಾಬಾದ್‌ನ ಇಕ್ರೀಸ್ಯಾಟ್ ಸಂಸ್ಥೆ ವಿಜ್ಞಾನಿ ಡಾ.ಕೃಷ್ಣಪ್ಪ, ಸುವಾಸ್ ವಾಣಿ, ಜಿಲ್ಲಾಧಿಕಾರಿ ದೀಪ್ತಿ ಅದಿತ್ಯ ಕಾನಡೆ, ಸಿಇಒ ಸಿದ್ದರಾಮಯ್ಯ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಎನ್. ಮಂಜುನಾಥ್, ಕೃಷಿ ಇಲಾಖೆ ಉಪ ನಿರ್ದೇಶಕಿ ಅನುರೂಪಾ, ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ವಿ. ಮಂಜುನಾಥ್, ಅರುಂಧತಿ, ಡಿ.ನರಸಿಂಹಮೂರ್ತಿ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.