ADVERTISEMENT

ಶಿಕ್ಷಕರ ವರ್ಗಾವಣೆ ತಡೆ: ಶಾಸಕರ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2011, 10:40 IST
Last Updated 20 ಜೂನ್ 2011, 10:40 IST

ಬಾಗೇಪಲ್ಲಿ: ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಯಿಂದದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕುಂಠಿತವಾಗುತ್ತಿದೆ. ಶಿಕ್ಷಕರ ವರ್ಗಾವಣೆ ಮಾಡಬಾರರು ಎಂದು ಶಾಸಕ ಎನ್.ಸಂಪಂಗಿ ಕ್ಷೇತ್ರಶಿಕ್ಷಣಾಧಿಕಾರಿ ಎಂ.ಆರ್.ಕೃಷ್ಣಪ್ಪಗೆ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಈಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿ, ಶಿಕ್ಷಕರ ವರ್ಗಾವಣೆ ಬಗ್ಗೆ ಶಿಕ್ಷಣ ಸಚಿವ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸಲಾಗು ವುದು ಎಂದರು.

ತಾಲ್ಲೂಕಿನಲ್ಲಿ ಸುಮಾರು 315 ಶಿಕ್ಷಕರ ಕೊರತೆ ಇದೆ. ಸುಮಾರು 229 ಮಂದಿ ಶಿಕ್ಷಕರು ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದಾರೆ. ತಾಲ್ಲೂಕಿನ ಕೆಲ ಸರ್ಕಾರಿ ಶಾಲೆಗಳಿಗೆ ಸ್ವಂತ ಕಟ್ಟಡ, ಶೌಚಾಲಯ ಗಳು ಇಲ್ಲದೆ ವಿದ್ಯಾರ್ಥಿಗಳು ಪರಿತಪಿಸ ಬೇಕಾಗಿದೆ ಎಂದು ಬಿಇಓ ಕೃಷ್ಣಪ್ಪ ಸಭೆಗೆ ಮಾಹಿತಿ ತಿಳಿಸಿದರು.

ತಾಲ್ಲೂಕಿನ ಮಿಟ್ಟೇಮರಿ ಗ್ರಾಮದ ಸುಮಾರು 15 ಎಕರೆ ಸ್ಥಳದಲ್ಲಿ 50 ಕೋಟಿ ವೆಚ್ಚದ 220 ಕೆ.ವಿ ಸಾಮಾರ್ಥ್ಯದ ವಿದ್ಯುತ್ ಸರಬರಾಜು ಕೇಂದ್ರದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪ್ರಾರಂಭಿಸಬೇಕೆಂದು ಬೆಸ್ಕಾಂ ಎಇಇ ಉಮೇಶ್ ಅವರಿಗೆ ಶಾಸಕರು ಸೂಚಿಸಿದರು.

ಪಟ್ಟಣದ ಪಿಎಲ್‌ಡಿ ಬ್ಯಾಂಕ್ ರಸ್ತೆಯಲ್ಲಿ ಪುರಸಭೆ ವತಿಯಿಂದ ನಿರ್ಮಿಸಲಾಗಿರುವ ಹೂವು- ಹಣ್ಣು ಮಾರಾಟ ಮಳಿಗೆಗಳು ಉದ್ಘಾಟನೆ ಯಾಗದೆ ಲಕ್ಷಾಂತರ ಹಣ ನಷ್ಟವಾಗು ತ್ತಿದೆ ಎಂದು ಶಾಸಕರು ಆಕ್ಷೇಪಿಸಿದರು.

ಪುರಸಭಾ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್ ಪ್ರತಿಕ್ರಿಯಿಸಿ ಮಳಿಗೆಗಳನ್ನು ಹರಾಜು ಹಾಕಲಾಗುವುದು ಎಂದು ತಿಳಿಸಿದರು.

ಕೆಡಿಪಿ ಸಭೆಗೆ ಗೈರುಹಾಜರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲು ಜಿಲ್ಲಾಧಿಕಾರಿಗೆ ಪತ್ರ ಬರೆಯುವುದಾಗಿ ತಿಳಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಾಧಿಕಾರಿ ಪಿ.ನಾಗಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.