ADVERTISEMENT

ಸರ್ಕಾರದಿಂದ ಹೆಚ್ಚಿನ ಅನುದಾನ: ಶಾಸಕ ಸುಧಾಕರ್

​ಪ್ರಜಾವಾಣಿ ವಾರ್ತೆ
Published 15 ಜೂನ್ 2013, 10:10 IST
Last Updated 15 ಜೂನ್ 2013, 10:10 IST

ಚಿಕ್ಕಬಳ್ಳಾಪುರ: ಕ್ಷೇತ್ರದಲ್ಲಿ ತೀವ್ರವಾಗಿ ಕಾಡುತ್ತಿರುವ ಸಮಸ್ಯೆಗಳೇನು ಮತ್ತು ಪರಿಹಾರಗಳೇನು ಎಂಬ ಬಗ್ಗೆ ಮಾಹಿತಿ ಸಂಗ್ರಹಿಸುತ್ತೇನೆ. ಸಮಸ್ಯೆ ನಿವಾರಣೆ ಮತ್ತು ಪರಿಹಾರಕ್ಕಾಗಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇನೆ ಎಂದು ಶಾಸಕ ಡಾ. ಕೆ.ಸುಧಾಕರ್ ತಿಳಿಸಿದರು.

ತಾಲ್ಲೂಕಿನ ಅಜ್ಜವಾರ ಗ್ರಾಮದಲ್ಲಿ ಶುಕ್ರವಾರ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಬಾಕಿಯಿರುವ ಅಭಿವೃದ್ಧಿ ಕಾಮಗಾರಿಗಳು ಮತ್ತು ಆಗಬೇಕಿರುವ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಈಗಾಗಲೇ ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿ ಮತ್ತು ನಗರಸಭೆ ಅಧಿಕಾರಿಗಳಿಗೆ ಕೋರಿದ್ದೇನೆ. ಸ್ಥಳೀಯ ಮುಖಂಡರೊಂದಿಗೂ ಚರ್ಚಿಸಿದ್ದೇನೆ ಎಂದರು.

ಎಷ್ಟೇ ಕಷ್ಟ, ಅಡ್ಡಿ- ಆತಂಕ ಎದುರಾದರೂ ಕ್ಷೇತ್ರಕ್ಕೆ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜನರ ಸಮಸ್ಯೆಗಳನ್ನು ಪರಿಹರಿಸಲು ಆದ್ಯತೆ ನೀಡುತ್ತೇನೆ ಎಂದು ಅವರು ಹೇಳಿದರು.

ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಮುಖಂಡರಾದ ಪಿ.ಎನ್.ಕೇಶವರೆಡ್ಡಿ, ಮರಳಕುಂಟೆ ಕೃಷ್ಣಮೂರ್ತಿ, ರವೀಂದ್ರರೆಡ್ಡಿ, ರವಿ, ಜಗದೀಶ, ಲಕ್ಷ್ಮಿಪತಿ, ಲಕ್ಷ್ಮಣ್, ಜಯರಾಮ್, ಪ್ರಕಾಶ್ ಮರಸನಹಳ್ಳಿ, ರಾಮಾಂಜಿ, ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.