ADVERTISEMENT

ಸರ್ಕಾರಿ ಆಸ್ಪತ್ರೆ ಸ್ಥಳಾಂತರಕ್ಕೆ ವಿರೋಧ

ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 12 ಜೂನ್ 2018, 10:56 IST
Last Updated 12 ಜೂನ್ 2018, 10:56 IST

ಗೌರಿಬಿದನೂರು: ಪಟ್ಟಣದ ಮಧ್ಯ ದಲ್ಲಿರುವ ಸಾರ್ವಜನಿಕ ಆಸ್ಪತ್ರೆ ಯನ್ನು ಬೇರೆಡೆ ಸ್ಥಳಾಂತರಿಸದರೆ ಜನಸಾ ಮಾನ್ಯರಿಗೆ, ರೋಗಿಗಳಿಗೆ ತೊಂದರೆ ಆಗುವುದು. ಈ ಯೋಜನೆ ಕೈಬಿಟ್ಟು ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ರಕ್ಷಣಾ ವೇದಿಕೆ ಕಾರ್ಯದರ್ಶಿ ಪ್ರಭಾಕರ್ ಒತ್ತಾಯಿಸಿದರು.

ಸಾರ್ವಜನಿಕ ಆಸ್ಪತ್ರೆ ಸ್ಥಳಾಂತರಿಸಿ ರುವುದನ್ನು ವಿರೋಧಿಸಿ ಪಟ್ಟಣದ ಆಸ್ಪತ್ರೆಯ ಎದುರು ವಿವಿಧ ಸಂಘಟನೆ ಗಳ ಪದಾಧಿಕಾರಿಗಳು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

‘ಪಟ್ಟಣದ ಹೊರವಲಯದಲ್ಲಿ ₹ 14 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸಲಾಗಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಹೊರರೋಗಿಗಳಿಗೆ ಚಿಕಿತ್ಸೆ ನೀಡಲು ಅನರ್ಹವಾಗಿದೆ. ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿಯಾಗಿ ಸ್ಥಳಾಂತರ ಮಾಡಿರುವುದು ಅವೈಜ್ಞಾನಿಕವಾಗಿದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ತೊಂದರೆಯಾಗುತ್ತಿದೆ. ಕೂಡಲೇ ಸಾರ್ವಜನಿಕ ಆಸ್ಪತ್ರೆಯನ್ನು ಮತ್ತೆ ಇದೇ ಸ್ಥಳಕ್ಕೆ ರವಾನಿಸಬೇಕು' ಎಂದು ಅವರು ಹೇಳಿದರು.

ADVERTISEMENT

ಸಿಪಿಎಂ ಮುಖಂಡ ಸಿದ್ದಗಂಗಪ್ಪ ಮಾತನಾಡಿ, 'ಸರ್ಕಾರವು ಗ್ರಾಮೀಣ ಭಾಗದ ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಕೋಟ್ಯಂತರ ಹಣ ವೆಚ್ಚ ಮಾಡಿ ಆಸ್ಪತ್ರೆ ನಿರ್ಮಿಸಲಾಗಿದೆ. ಆದರೆ ಮಕ್ಕಳು ಮತ್ತು ತಾಯಂದಿರ ಸುರಕ್ಷತೆಗಾಗಿ ಪಟ್ಟಣದ ಹೊರಭಾಗಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳುವರು. ಇದು ಸಮರ್ಥನೀಯ ಅಲ್ಲ ಎಂದರು.

ಸಮರ್ಪಕ ಸಂಚಾರ ಸೌಲಭ್ಯ ವ್ಯವಸ್ಥೆ ಇಲ್ಲದೆ ತೊಂದರೆ ಆಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಮಧ್ಯ ಪ್ರವೇಶಿಸಿ ಸಮಸ್ಯೆ ನಿವಾರಿಸಬೇಕು ಎಂದು ಒತ್ತಾಯಿಸಿದರು.

ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎಲ್. ಅಶ್ವತ್ಥನಾರಾಯಣ, ಮುಖಂಡರಾದ ಬಷೀರ್, ನಟರಾಜು, ಹಂಪಸಂದ್ರ ದೇವು, ಹರೀಶ್, ಶ್ರೀಧರ್, ಜಯಕರ್ನಾಟಕ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಪ್ರದೀಪ್, ಲಕ್ಷ್ಮಿ, ಅರುಣ್, ಮಹದೇವ್, ಮುರಳಿ, ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.