ADVERTISEMENT

ಸ್ಪರ್ಧಾ ಮನೋಭಾವ ರೂಢಿಸಿಕೊಳ್ಳಲು ಸಲಹೆ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2012, 8:20 IST
Last Updated 9 ನವೆಂಬರ್ 2012, 8:20 IST

ಗೌರಿಬಿದನೂರು: ಪಠ್ಯ ಚಟುವಟಿಕೆಗಳ ಜೊತೆಗೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಸ್ಪರ್ಧಾಮನೋಭಾವ ರೂಢಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಮೀನ್‌ತಾಜ್ ತಿಳಿಸಿದರು.

ಸಾರ್ವಜನಿಕ  ಶಿಕ್ಷಣ ಇಲಾಖೆ ವತಿಯಿಂದ ಪಟ್ಟಣದ ಕೋಟೆ ಬಾಲಕಿಯರ ಪ್ರೌಢಶಾಲೆ ಸಭಾಂಗಣದಲ್ಲಿ ಗುರುವಾರ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ  ಚರ್ಚಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆ  ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು. 

ತಾಲ್ಲೂಕಿನ ವಿವಿಧ ಪ್ರೌಢಶಾಲೆಗಳಿಂದ ಆಗಮಿಸಿದ್ದ 50 ಮಂದಿ ವಿದ್ಯಾರ್ಥಿಗಳು ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಪ್ರಬಂಧ ಸ್ಪರ್ಧೆಯಲ್ಲಿ 22 ವಿದ್ಯಾರ್ಥಿಗಳು  ಪಾಲ್ಗೊಂಡರು. ಶಿಕ್ಷಣ ಸಂಯೋಜಕ ರಾಮಕೃಷ್ಣಪ್ಪ, ತೀರ್ಪುಗಾರರಾಗಿ  ಶಿಕ್ಷಣ ಸಂಯೋಜಕಿ  ರಾಜಲಕ್ಷ್ಮೀಬಾಯಿ, ಜಿ.ಸಿ.ರಾಮಚಂದ್ರಯ್ಯ, ಫಾರೂಕ್ ಅಹಮ್ಮದ್, ಲಕ್ಷ್ಮೀನರಸೇಗೌಡ, ಆರ್.ಸುಮಂಗಲಾ, ಪದ್ಮಲತಾ, ಮಂಜುನಾಥ್, ಜಯಕೀರ್ತಿ ಭಾಗವಹಿಸಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.