ADVERTISEMENT

`ಸ್ಪಷ್ಟ ಗುರಿಯಿಂದ ಉತ್ತಮ ಸಾಧನೆ'

​ಪ್ರಜಾವಾಣಿ ವಾರ್ತೆ
Published 14 ಜೂನ್ 2013, 10:26 IST
Last Updated 14 ಜೂನ್ 2013, 10:26 IST

ಗೌರಿಬಿದನೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಹಲವು ಶಾಲೆ- ಕಾಲೇಜುಗಳನ್ನು ಸ್ಥಾಪಿಸಿ, ಉತ್ತಮ ಶಿಕ್ಷಣ ನೀಡಲಾಗುತ್ತಿದೆ ಎಂದು ನ್ಯಾಷನಲ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಡಾ.ಎ.ಎಚ್.ರಾಮರಾವ್ ತಿಳಿಸಿದರು.

ಪಟ್ಟಣದ ಅಶ್ವತ್ಥಯ್ಯ ಇಸ್ತೂರು ಸಂಜೀವಮ್ಮ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಡಾ.ಎಚ್.ಎನ್. ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪ್ರಥಮ ಪಿಯುಸಿ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಚ್.ನರಸಿಂಹಯ್ಯ ಕಡು ಬಡತನದಲ್ಲಿ ಶಿಕ್ಷಣ ಪಡೆದು ಅತ್ಯುನ್ನತ ಸ್ಥಾನಕ್ಕೆ ಏರಿದರು. ಪ್ರತಿಯೊಬ್ಬ ವಿದ್ಯಾರ್ಥಿ ಸ್ಪಷ್ಟವಾದ ಗುರಿ ಹೊಂದುವ ಮೂಲಕ ಉತ್ತಮ ಸಾಧನೆ ಮಾಡಲು ಸಾಧ್ಯ. ಇದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿಗಳು ಇಂದು ಅತ್ಯುನ್ನತ ಪದವಿಗಳಲ್ಲಿದ್ದಾರೆ ಎಂದರು.

ಆಡಳಿತ ಮಂಡಳಿ ಸದಸ್ಯ ಪಿ.ಎಲ್.ವೆಂಕಟರಾಮರೆಡ್ಡಿ, ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾದದ್ದು. ದುಶ್ಚಟಗಳಿಗೆ ಬಲಿಯಾಗದೆ ನಿರಂತರ ಪರಿಶ್ರಮದಿಂದ ಉತ್ತಮ ಶಿಕ್ಷಣ ಪಡೆಯುವಂತೆ ಸಲಹೆ ನೀಡಿದರು.

ನ್ಯಾಷನಲ್ ಎಜುಕೇಷನ್ ಸೊಸೈಟಿ ಗೌರವ ಕಾರ್ಯದರ್ಶಿ ಎಸ್.ಎನ್.ನಾಗರಾಜರೆಡ್ಡಿ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸಿ.ಆರ್.ಸಂಪತ್‌ಕುಮಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಸಿ.ನಾಗರಾಜು, ಆಡಳಿತ ಮಂಡಳಿ ಸದಸ್ಯ ವೆಂಕಟರವಣಪ್ಪ, ಎಚ್.ವಿ.ವೆಂಕಟೇಶ್, ಉಪನ್ಯಾಸಕರಾದ ಅಪ್ಸರ್‌ಪಾಷಾ, ಜಯರಾಮಪ್ಪ, ವಿಜಯ್‌ಕುಮಾರ್, ಮದ್ದಿಲೇಟಿ, ಖಾದ್ರಿ ನರಸಿಂಹಯ್ಯ, ನಾಗಜ್ಯೋತಿ, ಗುಣರಂಜನಿ, ಸುನೀತಾ, ಟಿ.ಜಯರಾಮ್ ಮತ್ತಿತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.