ADVERTISEMENT

ಹೈನುಗಾರಿಕೆಗೆ ಪ್ರೋತ್ಸಾಹದ ಭರವಸೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2013, 6:19 IST
Last Updated 18 ಸೆಪ್ಟೆಂಬರ್ 2013, 6:19 IST

ಚಿಕ್ಕಬಳ್ಳಾಪುರ: ಪೆರೇಸಂದ್ರ ಹಾಲು ಉತ್ಪಾದಕರ ಸಹಕಾರ ಸಂಘ  ಉತ್ತಮ ಸಾಧನೆ ಮಾಡಲಿ ಎಂದು ಶಾಸಕ ಡಾ. ಕೆ.ಸುಧಾಕರ್‌ ತಿಳಿಸಿದರು.

ತಾಲ್ಲೂಕಿನ ಪೆರೇಸಂದ್ರದಲ್ಲಿ ಇತ್ತೀಚೆಗೆ ನಡೆದ ಪೆರೆಸಂದ್ರ ಹಾಲು ಉತ್ಪಾದಕರ ಸಹಕಾರಿ ಸಂಘದ ಬೆಳ್ಳಿಹಬ್ಬ ಆಚರಣೆ ಮತ್ತು ಬಿಎಂಸಿ ಕೇಂದ್ರ ಜನರೇಟರ್‌ ಕೊಠಡಿ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೈನುಗಾರಿಕೆಯನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸಬೇಕು ಎಂಬ ಗುರಿ ಹೊಂದಿರುವ ಸರ್ಕಾರ ಹಾಲು ಉತ್ಪಾದಕರಿಗೆ ಹೆಚ್ಚುವರಿ ಪ್ರೋತ್ಸಾಹ ಧನ ನೀಡುತ್ತಿದೆ.

ಹಾಲು ಉತ್ಪಾದಕರಿಗೆ ಉಪಯುಕ್ತವಾಗುವ  ರೀತಿಯಲ್ಲಿ ಯೋಜನೆಗಳನ್ನು ರೂಪಿ ಸುತ್ತಿದೆ. ಹಾಲು ಉತ್ಪಾದಕರ ಸಂಘದ ಸದಸ್ಯರು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳ ಬೇಕು ಎಂದು ಅವರು ತಿಳಿಸಿದರು.

ಕರ್ನಾಟಕ ಹಾಲು ಮಹಾಮಂಡಳಿ ನಿರ್ದೇಶಕ ಕೆ.ವಿ.ನಾಗರಾಜ್‌ ಮಾತ ನಾಡಿ, 1980ರಲ್ಲಿ ಸ್ಥಾಪನೆಯಾದ ಪೆರೇಸಂದ್ರ ಹಾಲು ಉತ್ಪಾದಕರ ಸಹಕಾರ ಸಂಘ ಮೊದಲ ದಿನದಂದೇ 150 ಲೀಟರ್‌ ಹಾಲು ಸಂಗ್ರಹಿಸಿತು.  ಒಕ್ಕೂಟದಿಂದ ಸುಮಾರು 91 ಸಾವಿರ ಲೀಟರ್‌ನಷ್ಟು ಹಾಲು ಸಂಗ್ರಹಿಸುತ್ತಿದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಎನ್.ಕೇಶವರೆಡ್ಡಿ, ಪೆರೆಸಂದ್ರ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯ ಪ್ರವರ್ತಕ ಲಕ್ಷ್ಮಿನಾರಾಯಣ ರೆಡ್ಡಿ, ಮುಖಂಡ ರವೀಂದ್ರರೆಡ್ಡಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ಮಂಜುಳಾ ಮಂಜುನಾಥ್, ಪೆರೆಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.