ಗೌರಿಬಿದನೂರು: ಗುಜರಾತ್‌ನಲ್ಲಿ ನರೇಂದ್ರ ಮೋದಿ ಮಾಡಿದ ಅಭಿವೃದ್ಧಿ ಕೆಲಸ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಭ್ರಷ್ಟಾಚಾರಗಳನ್ನು ಬಿಜೆಪಿ ಕಾರ್ಯಕರ್ತರು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಂ.ರವಿನಾರಾಯಣರೆಡ್ಡಿ ತಿಳಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಯುವ ಬಿಜೆಪಿ ಘಟಕ ಭಾನುವಾರ ಏರ್ಪಡಿಸಿದ್ದ ಮತಗಟ್ಟೆ ಸಮಿತಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಿಜೆಪಿ ಮುಸ್ಲಿಂ ವಿರೋಧಿ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಕೆಳ ಹಂತದ ಚುನಾವಣೆಗಳಿಗೆ ಶ್ರಮಿಸುವಂತೆಯೇ ಲೋಕಸಭೆ ಚುನಾವಣೆಗೂ ಕಾರ್ಯಕರ್ತರು ನಿಷ್ಠೆಯಿಂದ ದುಡಿಯಬೇಕು ಎಂದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಗೋಪಿನಾಥ್ ಮಾತನಾಡಿದರು. ಪುರಸಭೆ ಸದಸ್ಯರಾದ ಮಾರುಕಟ್ಟೆ ಮೋಹನ್, ಗೋವಿಂದರಾಜು, ಪಕ್ಷದ ಮುಖಂಡರಾದ ಕೋಚಿಮುಲ್ ನಿರ್ದೇಶಕ ರಮೇಶ್, ವೆಂಕಟರಾಮರೆಡ್ಡಿ, ನಾಗರಾಜರೆಡ್ಡಿ, ಮುರಳೀಧರ್, ಉಸ್ಮಾನ್, ಕೃಷ್ಣಮೂರ್ತಿ, ಕೃಷ್ಣಪ್ಪ, ರಮೇಶ್ ರಾವ್, ಜಯಣ್ಣ, ಕೋಟೆ ವೇಣು, ಶಶಿಧರ್, ಶೋಭಾ, ಜಯಲಕ್ಷ್ಮಮ್ಮ, ಮುನಿಲಕ್ಷ್ಮಮ್ಮ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.