ADVERTISEMENT

107 ಹೊಸ ಪ್ರಕರಣ, ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 15:02 IST
Last Updated 21 ಸೆಪ್ಟೆಂಬರ್ 2020, 15:02 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ 107 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಈವರೆಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,635ಕ್ಕೆ ಏರಿಕೆಯಾಗಿದ್ದು, 80 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 6,635 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಸೋಮವಾರ 78 ಜನರು ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು. ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 937 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಭಾನುವಾರದವರೆಗೆ 1,01525 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 94,890 ಜನರ ವರದಿಗಳು ನೆಗೆಟಿವ್ ಬಂದಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.