ADVERTISEMENT

ಒಂದೇ ದಿನ120 ಕೋವಿಡ್ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2020, 15:51 IST
Last Updated 7 ಸೆಪ್ಟೆಂಬರ್ 2020, 15:51 IST
ಚಿಕ್ಕಬಳ್ಳಾಪುರ ಕೋವಿಡ್ ಆಸ್ಪತ್ರೆ
ಚಿಕ್ಕಬಳ್ಳಾಪುರ ಕೋವಿಡ್ ಆಸ್ಪತ್ರೆ   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸೋಮವಾರ 120 ಹೊಸ ಕೋವಿಡ್‌ 19 ಪ್ರಕರಣಗಳು ವರದಿಯಾಗಿದ್ದು, ಒಬ್ಬ ಸೋಂಕಿತರು ಮೃತಪಟ್ಟಿದ್ದಾರೆ. ಇದೇ ವೇಳೆ 107 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಮನೆಗೆ ಮರಳಿದರು.

ಜಿಲ್ಲೆಯಲ್ಲಿ ಸೋಮವಾರದವರೆಗೆ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ 5,070ಕ್ಕೆ ಏರಿಕೆಯಾಗಿದೆ. 70 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಚಿಕಿತ್ಸೆಯಿಂದ 3,999 ಜನರು ಗುಣಮುಖರಾಗಿದ್ದು, ಪ್ರಸ್ತುತ ಜಿಲ್ಲೆಯ ಕೋವಿಡ್‌ ಆಸ್ಪತ್ರೆಯಲ್ಲಿ 1,001 ಸೋಂಕಿತರು ಚಿಕಿತ್ಸೆ ‍ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT