ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 130 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 8,314ಕ್ಕೆ ಏರಿಕೆಯಾಗಿದೆ.
ಸೋಮವಾರ ಕೋವಿಡ್ ಆಸ್ಪತ್ರೆಯಿಂದ 278 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 1,19,539 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,11,58 ಜನರ ವರದಿಗಳು ನೆಗೆಟಿವ್ ಬಂದಿವೆ. ಸೋಂಕಿತರ ಪೈಕಿ ಈವರೆಗೆ 91 ಮಂದಿ ಮೃತಪಟ್ಟರೆ, 6,737 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ 1,486 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.