ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 143 ಜನರಲ್ಲಿ ಕೋವಿಡ್ 19 ಇರುವುದು ದೃಢಪಟ್ಟರೆ,61 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸಾವಿನ ಪ್ರಕರಣಗಳು ವರದಿಯಾಗಿಲ್ಲ.
ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 78,909 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿದ್ದು, ಈ ಪೈಕಿ 74,485 ಮಂದಿ ವರದಿ ನೆಗೆಟಿವ್ ಬಂದಿವೆ. 4,424 ಜನರಿಗೆ ಕೋವಿಡ್ ತಗುಲಿದ್ದು ಈ ಪೈಕಿ 66 ಜನರು ಮೃತಪಟ್ಟಿದ್ದಾರೆ.
ಸೋಂಕಿತರ ಪೈಕಿ 3,511 ಮಂದಿ ಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾಗಿದ್ದು, ಪ್ರಸ್ತುತ ಕೋವಿಡ್ ಆಸ್ಪತ್ರೆಯಲ್ಲಿ 847 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಟ್ಟಿ..
ಜಿಲ್ಲೆಯಲ್ಲಿ ತಾಲ್ಲೂಕುವಾರು ಕೋವಿಡ್ ಪ್ರಕರಣಗಳ ವಿವರ
ತಾಲ್ಲೂಕು;ಸೆಪ್ಟೆಂಬರ್ 2;ಒಟ್ಟು;ಬಿಡುಗಡೆ;ಒಟ್ಟು ಬಿಡುಗಡೆ;ಸಕ್ರಿಯ ಪ್ರಕರಣ;ಸಾವು
ಚಿಕ್ಕಬಳ್ಳಾಪುರ;42;1,550;12;1,318;209;23
ಬಾಗೇಪಲ್ಲಿ;36;545;6;377;161;7
ಚಿಂತಾಮಣಿ;26;769;12;609;143;17
ಗೌರಿಬಿದನೂರು;20;935;23;736;186;13
ಗುಡಿಬಂಡೆ;9;197;6;165;31;1
ಶಿಡ್ಲಘಟ್ಟ;10;428;2;306;117;5
ಒಟ್ಟು;143;4,424;61;3,511;847;66
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.