ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸೋಮವಾರ 19 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಹತ್ತು, ಗೌರಿಬಿದನೂರಿನ ಇಬ್ಬರು, ಚಿಂತಾಮಣಿಯ ನಾಲ್ಕು, ಬಾಗೇಪಲ್ಲಿ, ಗುಡಿಬಂಡೆ, ಶಿಡ್ಲಘಟ್ಟ ತಾಲ್ಲೂಕಿನ ತಲಾ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ದಿನ 13 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 14,090 ಜನರಿಗೆ ಸೋಂಕು ತಗುಲಿದ್ದು, 13,889 ಮಂದಿ ಗುಣವಾಗಿದ್ದಾರೆ. 82 ರೋಗಿಗಳು ಚಿಕಿತ್ಸೆ ಹಂತದಲ್ಲಿ ಇದ್ದಾರೆ. 118 ರೋಗಿಗಳು ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.