ADVERTISEMENT

22 ಹೊಸ ಪ್ರಕರಣಗಳು, 24 ಮಂದಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2020, 1:52 IST
Last Updated 13 ನವೆಂಬರ್ 2020, 1:52 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 22 ಕೋವಿಡ್‌ ಪ್ರಕರಣಗಳು ವರದಿಯಾದರೆ, 24 ಮಂದಿ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಂಡರು.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 1,83,223 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,72,375 ಜನರ ವರದಿಗಳು ನೆಗೆಟಿವ್ ಬಂದಿವೆ. ಈವರೆಗೆ ಕೋವಿಡ್‌ ಸೋಂಕಿತರ ಸಂಖ್ಯೆ 11,848ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 11,622 ಮಂದಿ ಗುಣಮುಖರಾಗಿದ್ದು, 113 ಮಂದಿ ಮೃತಪಟ್ಟರೆ, ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 113 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.