ADVERTISEMENT

ಭವನ ನಿರ್ಮಾಣಕ್ಕೆ ₹ 2.5 ಲಕ್ಷ ಮಂಜೂರು

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2020, 4:43 IST
Last Updated 14 ಡಿಸೆಂಬರ್ 2020, 4:43 IST
ಚಿಂತಾಮಣಿಯಲ್ಲಿ ನಡೆದ ನಿವೃತ್ತ ಸರ್ಕಾರಿ ನೌಕರರ ಸಂಘದ ಸಭೆಯಲ್ಲಿ ಭಾಗವಹಿಸಿದ್ದ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಲಕ್ಷ್ಮೀನಾರಾಯಣ ಹಾಗೂ ಗಾಯನ ಕಾರ್ಯಕ್ರಮ ನಡೆಸಿಕೊಟ್ಟ ಸ್ನೇಹಜೀವಿ ಕಲಾತಂಡ
ಚಿಂತಾಮಣಿಯಲ್ಲಿ ನಡೆದ ನಿವೃತ್ತ ಸರ್ಕಾರಿ ನೌಕರರ ಸಂಘದ ಸಭೆಯಲ್ಲಿ ಭಾಗವಹಿಸಿದ್ದ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಲಕ್ಷ್ಮೀನಾರಾಯಣ ಹಾಗೂ ಗಾಯನ ಕಾರ್ಯಕ್ರಮ ನಡೆಸಿಕೊಟ್ಟ ಸ್ನೇಹಜೀವಿ ಕಲಾತಂಡ   

ಚಿಂತಾಮಣಿ: ನಗರದಲ್ಲಿ ನಿವೃತ್ತ ನೌಕರರ ಸಂಘದ ಕಚೇರಿ ನಿರ್ಮಾಣಕ್ಕೆ ₹ 2.5 ಲಕ್ಷ ಮಂಜೂರಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆಯ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ತಿಳಿಸಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ನಿವೃತ್ತ ನೌಕರರ ಸಭೆಯಲ್ಲಿ ಮಾತನಾಡಿದರು.

ಸಂಘದ ವಾರ್ಷಿಕ ಮಹಾಸಭೆಯನ್ನು 2021ರ ಜನವರಿ 9ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ADVERTISEMENT

ನಿವೃತ್ತ ನೌಕರರು ಹಾಗೂ ಪಿಂಚಣಿ ಪಡೆಯುತ್ತಿರುವವರು ಡಿ. 31ರ ಒಳಗಾಗಿ ಲೈಫ್ ಸರ್ಟಿಫಿಕೇಟ್ ಅನ್ನು ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ಶಾಖೆಗಳಿಗೆ ಸಲ್ಲಿಸಬೇಕು ಎಂದು ತಿಳಿಸಿದರು.

ಪ್ರತಿ ವರ್ಷ ನ. 30ರ ಒಳಗಾಗಿ ಲೈಫ್ ಸರ್ಟಿಫಿಕೇಟ್ ಸಲ್ಲಿಸಬೇಕಾಗಿತ್ತು. ಈ ವರ್ಷ ಕೋವಿಡ್-19 ಹಿನ್ನೆಲೆಯಲ್ಲಿ ಡಿ. 31ರವರೆಗೂ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ನಿವೃತ್ತ ಶಿಕ್ಷಕ ಎನ್. ಗೋಪಾಲರೆಡ್ಡಿ ನಿವೃತ್ತಿಯ ಅಂಚಿನಲ್ಲಿರುವ ನೌಕರರ ಸಮಸ್ಯೆ ಕುರಿತು ಮಾತನಾಡಿದರು. ವೆಂಕಟೇಶಪ್ಪ ಆಧ್ಯಾತ್ಮಿಕತೆ ಕುರಿತು ಉಪನ್ಯಾಸ ನೀಡಿದರು. ಕೆ.ಎಲ್. ನರಸಿಂಹಮೂರ್ತಿ ಹಾಸ್ಯ ಚಟಾಕಿ ಹಾರಿಸಿ ರಂಜಿಸಿದರು. ಸ್ನೇಹಜೀವಿ ಕಲಾ ತಂಡದ ಆರ್.ವಿ. ವೆಂಕಟರಾಮರೆಡ್ಡಿ, ಎಸ್.ಎಫ್.ಎಸ್. ಸುರೇಶ್, ಎ. ನಾರಾಯಣಸ್ವಾಮಿ, ಜಿ. ಕೃಷ್ಣಪ್ಪ ನಡೆಸಿಕೊಟ್ಟ ಗಾಯನ ಕಾರ್ಯಕ್ರಮ ಮುದ ನೀಡಿತು.

ಸಂಘದ ಉಪಾಧ್ಯಕ್ಷ ಎ.ಎಸ್. ರಾಮಚಂದ್ರಮೂರ್ತಿ, ಪ್ರಧಾನ ಕಾರ್ಯದರ್ಶಿ ಎಸ್. ಆಂಜನಪ್ಪ, ಪದಾಧಿಕಾರಿಗಳಾದ ಕೆ.ಎನ್. ನಂಜುಂಡಗೌಡ, ವೆಂಕಟಸ್ವಾಮಿ, ಜಿಲ್ಲಾ ಘಟಕದ ಉಪಾಧ್ಯಕ್ಷ ಎನ್. ಲಕ್ಷ್ಮೀನಾರಾಯಣ, ಎ. ಚಂದ್ರಶೇಖರಬಾಬು ಹಾಜರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.