ADVERTISEMENT

25 ಹೊಸ ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 7:35 IST
Last Updated 27 ನವೆಂಬರ್ 2020, 7:35 IST
ಶಿಡ್ಲಘಟ್ಟದ ನ್ಯಾಯಾಲಯ ಆವರಣದಲ್ಲಿ ಗುರುವಾರ ಸಂವಿಧಾನ ದಿನಾಚರಣೆ, ಮೂಲಭೂತ ಹಕ್ಕುಗಳ ಮತ್ತು ಮೂಲಭೂತ ಕರ್ತವ್ಯಗಳ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು
ಶಿಡ್ಲಘಟ್ಟದ ನ್ಯಾಯಾಲಯ ಆವರಣದಲ್ಲಿ ಗುರುವಾರ ಸಂವಿಧಾನ ದಿನಾಚರಣೆ, ಮೂಲಭೂತ ಹಕ್ಕುಗಳ ಮತ್ತು ಮೂಲಭೂತ ಕರ್ತವ್ಯಗಳ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 25 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 17 ಮಂದಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಂಡರು.

ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ ಸೋಂಕಿತರ ಸಂಖ್ಯೆ 12,179ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 2,19,270 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 2,07,091 ಜನರ ವರದಿಗಳು ನೆಗೆಟಿವ್ ಬಂದಿವೆ.

ಒಟ್ಟು ಸೋಂಕಿತರ ಪೈಕಿ ಈವರೆಗೆ 11,989 ಮಂದಿ ಗುಣಮುಖರಾಗಿದ್ದು, 114 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 77 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.