ADVERTISEMENT

25 ಮಂದಿ ಆಸ್ಪತ್ರೆಯಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 3:46 IST
Last Updated 24 ನವೆಂಬರ್ 2020, 3:46 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ 25 ಕೋವಿಡ್‌ ಪ್ರಕರಣಗಳು ವರದಿಯಾದರೆ, 25 ಮಂದಿ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಂಡರು. ಈವರೆಗೆ ಕೋವಿಡ್‌ ಸೋಂಕಿತರ ಸಂಖ್ಯೆ 12,119ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 2,11,176 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 2,09,057 ಜನರ ವರದಿಗಳು ನೆಗೆಟಿವ್ ಬಂದಿವೆ.

ಒಟ್ಟು ಸೋಂಕಿತರ ಪೈಕಿ 11,934 ಮಂದಿ ಗುಣಮುಖರಾಗಿದ್ದು, 113 ಮಂದಿ ಮೃತಪಟ್ಟರೆ, ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 72 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.