ADVERTISEMENT

ಚಿಕ್ಕಬಳ್ಳಾಪುರ: ಒಂದೇ ದಿನ 263 ಕೋವಿಡ್‌ ಪ್ರಕರಣ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 9:21 IST
Last Updated 28 ಸೆಪ್ಟೆಂಬರ್ 2020, 9:21 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ ಹೊಸದಾಗಿ 263 ಮಂದಿಗೆ ಕೋವಿಡ್‌ ತಗುಲಿ
ರುವುದು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿನ ಹಾವಳಿ ಇಂದಿಗೂಬೂದಿ ಮುಚ್ಚಿದ ಕೆಂಡದಂತಿದೆ ಎಂಬುದಕ್ಕೆ ಪುಷ್ಟಿ ನೀಡಿದೆ.

ಜಿಲ್ಲೆಯಲ್ಲಿ ಭಾನುವಾರದವರೆಗೆ ಸೋಂಕಿತರ ಸಂಖ್ಯೆ 7,222ಕ್ಕೆ ಏರಿಕೆಯಾಗಿದೆ. ಈವರೆಗೆ ಸೋಂಕಿತರ ಪೈಕಿ 83 ಮಂದಿ ಮೃತಪಟ್ಟರೆ, 5,752 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಭಾನುವಾರ 26 ಜನರು ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಗೊಂಡರು.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಶನಿವಾರದವರೆಗೆ 1,06,558 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 99,260 ಜನರ ವರದಿಗಳು ನೆಗೆಟಿವ್ ಬಂದಿವೆ. ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 1,150 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.