ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 28 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 29 ಮಂದಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಂಡರು.
ಜಿಲ್ಲೆಯಲ್ಲಿ ಈವರೆಗೆ ಕೋವಿಡ್ ಸೋಂಕಿತರ ಸಂಖ್ಯೆ 12,255ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 2,23,568 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 2,12,527 ಜನರ ವರದಿಗಳು ನೆಗೆಟಿವ್ ಬಂದಿವೆ.
ಒಟ್ಟು ಸೋಂಕಿತರ ಪೈಕಿ ಈವರೆಗೆ 12,073 ಮಂದಿ ಗುಣಮುಖರಾಗಿದ್ದು, 114 ಮಂದಿ ಮೃತಪಟ್ಟಿದ್ದಾರೆ. ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ 69 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.