
ಪ್ರಜಾವಾಣಿ ವಾರ್ತೆ
ಚಿಂತಾಮಣಿ: ತಾಲ್ಲೂಕಿನ ಕೊಡಗೊಂಡ್ಲು ಗ್ರಾಮದ ಕೆರೆಯಲ್ಲಿ ಮುಳುಗಿ ಮಂಗಳವಾರ ಸಂಜೆ ಮೂವರು ಮಕ್ಕಳು ಮೃತಪಟ್ಟಿದ್ದಾರೆ.
ವೆಂಕಟೇಶ್ ಅವರ ಪುತ್ರ ರಾಮ, ಲಕ್ಷ್ಮಣ ಮತ್ತು ಮುನಿರಾಜು ಅವರ ಪುತ್ರ ಪ್ರಜ್ವಲ್ ಮೃತರು.ತಾಲ್ಲೂಕಿನಲ್ಲಿ ಉತ್ತಮ ಮಳೆ ಆಗುತ್ತಿದ್ದು 30 ವರ್ಷಗಳ ನಂತರ ಗ್ರಾಮದ ಕೆರೆಯು ತುಂಬಿದೆ.
ಶಾಲೆಯಿಂದ ಮನೆಗೆ ಬಂದ ನಂತರ ಮೂವರು ಮಕ್ಕಳು ಕೆರೆ ಬಳಿ ಆಟವಾಡಲು ತೆರಳಿದ್ದರು. ಈ ವೇಳೆ ಕಾಲುಜಾರಿ ನೀರಿಗೆ ಬಿದ್ದಿದ್ದಾರೆ. ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.