
ಪ್ರಜಾವಾಣಿ ವಾರ್ತೆಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 35 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 11,826 ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 11,598 ಮಂದಿ ಗುಣಮುಖರಾಗಿದ್ದು, 113 ಮಂದಿ ಮೃತಪಟ್ಟರೆ, ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ 115 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ 26 ಮಂದಿ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಂಡರು.
ಆರೋಗ್ಯ ಇಲಾಖೆ ಸಿಬ್ಬಂದಿ ಈವರೆಗೆ 1,81,544 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 1,69,698 ಜನರ ವರದಿಗಳು ನೆಗೆಟಿವ್ ಬಂದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.