ADVERTISEMENT

ಅದಾಲತ್: 4,383 ಪ್ರಕರಣ ಇತ್ಯರ್ಥ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2021, 5:15 IST
Last Updated 28 ಮಾರ್ಚ್ 2021, 5:15 IST
ಮೆಗಾ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡಿದ್ದ ನ್ಯಾಯಾಧೀಶರು
ಮೆಗಾ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡಿದ್ದ ನ್ಯಾಯಾಧೀಶರು   

ಚಿಕ್ಕಬಳ್ಳಾಪುರ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಶನಿವಾರ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ ಒಟ್ಟು 4,383 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ತಾಲ್ಲೂಕು ನ್ಯಾಯಾಲಯಗಳಲ್ಲಿಯೂ ಅದಾಲತ್ ಜರುಗಿತು.

ಬ್ಯಾಂಕ್, ಅಪಘಾತ, ವೇತನ ಮತ್ತು ಭತ್ಯೆ, ಸಿವಿಲ್ ಸೇರಿದಂತೆ ರಾಜೀ ಆಗಬಹುದಾದ ಪ್ರಕರಣಗಳನ್ನು ಪರಿಹರಿಸಲಾಗಿದೆ. ಅಲ್ಲದೆ ಒಟ್ಟು ₹ 8.56 ಕೋಟಿ ಹಣಕಾಸು ವಿವಾದಗಳನ್ನು ಪರಿಹರಿಸಲಾಗಿದೆ.

ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಕ ಅವರ ಅಧ್ಯಕ್ಷತೆಯಲ್ಲಿ ಅದಾಲತ್ ನಡೆಯಿತು. ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್‌. ದೇವರಾಜು, ಜಿಲ್ಲಾ ಹೆಚ್ಚುವರಿ ನ್ಯಾಯಾಧೀಶರಾದ ಬಿ.ಸಿ. ಭಾನುಮತಿ, ಎಸ್. ನಟರಾಜ್, ವಿವೇಕಾನಂದ ಎಸ್. ಪಂಡಿತ್, ಸಿ.ವಿ. ಸನತ್, ಹಿರಿಯ ನ್ಯಾಯಾಧೀಶರಾದ ಶ್ರೀನಿವಾಸ್ ಬುದಾರ್ಕುರ್, ಲೋಕೇಶ್, ಸಿವಿಲ್ ನ್ಯಾಯಾಧೀಶರಾದ ಅನಿಲ್ ಪ್ರಕಾಶ್, ಮಾಲಾ ಸಿ., ಪಿ.ಎಂ. ಸಚಿನ್ ಅದಾಲತ್‌ನಲ್ಲಿ ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.