ADVERTISEMENT

ಜ.24ರಂದು 47,345 ಮನೆಗಳ ಹಂಚಿಕೆ–ಸಚಿವ ಜಮೀರ್

ವಸತಿ ಸಚಿವ ಜಮೀರ್ ಅಹ್ಮದ್ ಖಾನ್‌ ಮಾಹಿತಿ

​ಪ್ರಜಾವಾಣಿ ವಾರ್ತೆ
Published 9 ಜನವರಿ 2026, 21:13 IST
Last Updated 9 ಜನವರಿ 2026, 21:13 IST
ಜಮೀರ್ ಅಹ್ಮದ್ ಖಾನ್
ಜಮೀರ್ ಅಹ್ಮದ್ ಖಾನ್   

ಚಿಂತಾಮಣಿ: ‘ಗ್ಯಾರಂಟಿಗಳ ಒತ್ತಡದಲ್ಲೂ ಕಾಂಗ್ರೆಸ್‌ ಸರ್ಕಾರ ಕಳೆದ ಫೆಬ್ರುವರಿಯಲ್ಲಿ 36,789 ಮನೆಗಳನ್ನು ನೀಡಿದೆ. ಹುಬ್ಬಳ್ಳಿಯಲ್ಲಿ ಜ.24ರಂದು ನಡೆಯುವ ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ 47,345 ಮನೆಗಳನ್ನು ವಿತರಿಸಲಾಗುವುದು’ ಎಂದು ವಸತಿ ಸಚಿವ ಜಮೀರ್ ಅಹಮದ್‌ ಖಾನ್‌ ಮಾಹಿತಿ ನೀಡಿದರು.

ಶುಕ್ರವಾರ ತಾಲ್ಲೂಕಿನ ಚಿನ್ನಸಂದ್ರ ಗ್ರಾಮಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಒಂದು ಮನೆ ನಿರ್ಮಾಣಕ್ಕೆ ₹7.5 ಲಕ್ಷ ವೆಚ್ಚವಾಗುತ್ತದೆ. ಇದರಲ್ಲಿ ರಾಜ್ಯ ಸರ್ಕಾರ ₹1.5 ಲಕ್ಷ ಮತ್ತು ಕೇಂದ್ರ ಸರ್ಕಾರ ₹1.5 ಲಕ್ಷ ನೀಡುತ್ತದೆ. ಉಳಿದ ₹4.5 ಲಕ್ಷ ಫಲಾನುಭವಿಗಳು ಭರಿಸಬೇಕು’ ಎಂದರು. 

‘ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಒಂದೂ ಮನೆ ನೀಡಿಲ್ಲ. ಕೊಳಚೆ ನಿರ್ಮೂಲನಾ ಮಂಡಳಿಯಿಂದ ಆಗ ಒಂದು ಮನೆ ಮಂಜೂರು ಮಾಡಿದ್ದರೂ ನಾನು ರಾಜೀನಾಮೆ ನೀಡುವೆ’ ಎಂದು ಅವರು ಸವಾಲು ಹಾಕಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.